ಹುಬ್ಬಳ್ಳಿ:ಪ್ರಜಾಪ್ರಭುತ್ವದಲ್ಲಿ ಯಾರಿಗೆ ನಂಬಿಕೆ ಇಲ್ಲವೋ ಅಂತಹವರು ಆಪರೇಷನ್ ಕಮಲಕ್ಕೆ ಕೈ ಹಾಕುತ್ತಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ.. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರಿಗೆ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಬೇಕು ಎಂಬುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಬೇಕೇ ಹೊರತು ಆಪರೇಷನ್ ಕಮಲದಿಂದ ಅಲ್ಲ. ಯಾರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲವೋ ಅವರು ಹೀಗೆ ಮಾಡಲು ಸಾಧ್ಯ ಎಂದರು.
ಮಹಾರಾಷ್ಟ್ರದಲ್ಲಿ ಕಳ್ಳರು ಹಾಗೂ ದರೋಡೆಕೋರರ ಹಾಗೇ ರಾತ್ರೋರಾತ್ರಿ ರಾಷ್ಟ್ರಪತಿ ಆಡಳಿತ ವಾಪಸ್ ಪಡೆದು ಅಧಿಕಾರಕ್ಕೆರಿದ್ದಾರೆ. ಅದು ಪ್ರಜಾಪ್ರಭುತ್ವದದ ಕಗ್ಗೊಲೆ. ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದು ಅವರು ಅಸಮಾಧಾನ ಹೊರಹಾಕಿದರು.
ಆಪರೇಷನ್ ಕಮಲದ ಕುರಿತು ಮರು ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ. ನಾವು ಯಾವತ್ತಾದರೂ ಅವರನ್ನು ಕರೆದಿದ್ದೇವಾ?. ಹೋಗುವವರು ಈಗಾಗಲೇ ಹೋಗಿದ್ದಾರೆ. ಮತ್ತೆ ಯಾವ ಶಾಸಕರೂ ಹೋಗಲ್ಲ. ಅಜೀತ್ ಪವಾರ್ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅದಕ್ಕೆ ಬಿಜೆಪಿಗೆ ಸೇರಿಸಿಕೊಂಡಿದ್ದಾರೆ. ತಮ್ಮ ಮೇಲಿರುವ ಪ್ರಕರಣಗಳನ್ನ ವಜಾಗೊಳಿಸಿಕೊಳ್ಳಲಿಕ್ಕೆ ಹೋಗಿದ್ದಾರೆ ಎಂದರು.