ಹುಬ್ಬಳ್ಳಿ: ನಗರದಲ್ಲಿ ಬಿಜೆಪಿ ಮುಖಂಡರೊಬ್ಬರು ಆಹಾರ ಸಾಮಾಗ್ರಿ ಕಿಟ್ ವಿತರಣೆ ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವಿತರಣೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸಾಮಾಜಿಕ ಅಂತರ ಮರೆತು ಆಹಾರ ಸಾಮಾಗ್ರಿ ಕಿಟ್ ವಿತರಿಸಿದ ಬಿಜೆಪಿ ಮುಖಂಡ.. - BJP leader in Hubli has forgotten the social gap and distributed food kits
ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡು ಬಂದಿತು. ಆಹಾರ ಸಾಮಾಗ್ರಿ ಕಿಟ್ ವಿತರಣೆಯ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ.
ಆಹಾರ ಸಾಮಾಗ್ರಿ ಕಿಟ್ ವಿತರಣೆಯ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ದೃಶ್ಯ ಕಂಡು ಬಂದಿತು. ವಾರ್ಡ್ ನಂಬರ್ 34ರ ದೇಶಪಾಂಡೆ ನಗರದ ಕೃಷ್ಣ ಬಡಾವಣೆಯಲ್ಲಿ ಬಿಜೆಪಿ ಮುಖಂಡ ಲಕ್ಷ್ಮಣ ಉಪ್ಪಾರ ಅವರು ಎಸ್ ಎಸ್ ಶೆಟ್ಟರ್ ಫೌಂಡೇಶನ್ ವತಿಯಿಂದ ಆಹಾರ ಕಿಟ್ ವಿತರಣೆ ಮಾಡಿದರು.
ಆದರೆ, ಆಹಾರ ಸಾಮಾಗ್ರಿ ಕಿಟ್ ವಿತರಣೆ ವೇಳೆ ಸ್ಥಳದಲ್ಲಿ ಮಹಿಳೆಯರು ಜಮಾಯಿಸಿದ್ದಾರೆ. ಇಷ್ಟಿದ್ರೂ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದು ಕಂಡು ಬಂದಿತು. ಆಹಾರ ಸಾಮಾಗ್ರಿ ಕಿಟ್ ವಿತರಣೆಯ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಆದರೆ, ಇಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.