ಕರ್ನಾಟಕ

karnataka

ETV Bharat / state

'ಸಂಪುಟ ವಿಸ್ತರಣೆಗೆ ಯಡಿಯೂರಪ್ಪಗೆ ಪರ್ಮಿಶನ್ ಸಿಕ್ಕಿಲ್ಲ, ಬಿಜೆಪಿಯಲ್ಲಿ ಆಂತರಿಕ ಸ್ವಾತಂತ್ರವಿಲ್ಲ'

ಬಿಜೆಪಿ ರಾಷ್ಟ್ರೀಯ ನಾಯಕರು ಸಿಎಂ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ನೀಡಿಲ್ಲ. ಆ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.

former CM Siddaramaiah
ವಿಪಕ್ಷ ನಾಯಕ ಸಿದ್ದರಾಮಯ್ಯ

By

Published : Jan 28, 2020, 10:35 AM IST

ಹುಬ್ಬಳ್ಳಿ: ಬಿಜೆಪಿ ರಾಷ್ಟ್ರೀಯ ನಾಯಕರು ಸಿಎಂ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ನೀಡಿಲ್ಲ. ಆ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ

ನಗರದಲ್ಲಿಂದು ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಅವರ ರಾಷ್ಟ್ರೀಯ ನಾಯಕರು ಯಾವುದೇ ಸ್ವಾತಂತ್ರ ನೀಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪ ಅವರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ನೆರವನ್ನೂ ಬಿಡುಗಡೆ ಮಾಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಪಾಲು ಬಂದಿಲ್ಲ ಎಂದರು.

ಸಿಎಎ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಎ ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ. ಜಾತಿ, ಧರ್ಮದ ಆಧಾರದ ಮೇಲೆ ಈ ಕಾಯ್ದೆ ಜಾರಿ ಮಾಡಿದ್ದಾರೆ. ಈ ಕಾಯ್ದೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಹೇಳಿದರು.

ಸಿದ್ಧರಾಮಯ್ಯ ಮತ್ತೆ ವಕೀಲ ವೃತ್ತಿ ಮುಂದುವರೆಸಲಿದ್ದಾರೆ ಎಂಬ ವದಂತಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ವಕೀಲಿ ವೃತ್ತಿಯ ಸನ್ನದು ರದ್ದಾಗಿತ್ತು. ಅದನ್ನ ರಿವೋಕ್ ಮಾಡಲಿಕ್ಕೆ ಅರ್ಜಿ ಸಲ್ಲಿಸಿದ್ದೇನೆ. ನಲ್ವತ್ತು ವರ್ಷಗಳ ನಂತರ ಆ ವೃತ್ತಿ ಮಾಡಲು ಸಾಧ್ಯವೇ? ಎಂದು ಅವರು ಮರುಪ್ರಶ್ನೆ ಹಾಕಿದರು.

ಸಿಎಎ ಹೋರಾಟಕ್ಕೆ ಪಿಎಫ್ಐಗೆ ಹಣ ಹರಿದು ಬಂದಿರುವ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಈ ಬಗ್ಗೆ ಸಮಗ್ರ ತನಿಖೆಯಾಗಲಿ. ಆರೋಪ ಸಾಬೀತುಪಡಿಸಲಿ. ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದರು.

ABOUT THE AUTHOR

...view details