ಹುಬ್ಬಳ್ಳಿ : ಪಕ್ಷ ಸಂಘಟನೆ ಹಿನ್ನೆಲೆ ಬೆಳಗಾವಿ ವಿಭಾಗದ ಬಿಜೆಪಿ ಕಾರ್ಯಕರ್ತರ ಕಾರ್ಯಗಾರ - ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್ನಲ್ಲಿ ಬಿಜೆಪಿ ಕಾರ್ಯಕರ್ತರ ಕಾರ್ಯಾಗಾರ ಆಯೋಜನೆ
ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಬೆಳಗಾವಿ ಹಾಗೂ ಧಾರವಾಡ ವಿಭಾಗದ 9 ಜಿಲ್ಲೆಗಳ ಪ್ರಮುಖ ಕಾರ್ಯಕರ್ತರಿಗೆ ಬಿಜೆಪಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಕುರಿತಂತೆ ಸಲಹೆಗಳನ್ನು ನೀಡಲಾಯ್ತು..

ಹುಬ್ಬಳ್ಳಿ
ಹುಬ್ಬಳ್ಳಿ:ಬಿಜೆಪಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ದೃಷ್ಟಿಯಿಂದ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠ ವತಿಯಿಂದ ಹುಬ್ಬಳ್ಳಿಯಲ್ಲಿ ಕಾರ್ಯಕರ್ತರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಕಾರ್ಯಕರ್ತರಿಗೆ ಕಾರ್ಯಾಗಾರ
ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್, ಪ್ರಶಿಕ್ಷಣ ಪ್ರಕೋಷ್ಠ ರಾಜ್ಯ ಸಂಚಾಲಕ ಶ್ರೀಕಾಂತ ಸೇರಿದಂತೆ ಇತರರು ಭಾಗಿಯಾಗಿದ್ದರು. ಬೆಳಗಾವಿ ಹಾಗೂ ಧಾರವಾಡ ವಿಭಾಗದ 9 ಜಿಲ್ಲೆಗಳ ಪ್ರಮುಖ ಕಾರ್ಯಕರ್ತರಿಗೆ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಕುರಿತಂತೆ ಸಲಹೆ, ಸೂಚನೆಗಳನ್ನು ನೀಡಲಾಯಿತು.