ಕರ್ನಾಟಕ

karnataka

ETV Bharat / state

'ಹುಬ್ಬಳ್ಳಿ ಕಿಮ್ಸ್​ನಲ್ಲಿ ಕೋವಿಡ್ ರೋಗಿಗಳಿಗೆ ಬ್ಲ್ಯಾಕ್ ಫಂಗಸ್ ಪತ್ತೆ, ಆತಂಕ ಬೇಡ' - ಕಿಮ್ಸ್

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಆದರೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಮಾಹಿತಿ ನೀಡಿದ್ದಾರೆ.

Black Fungus to Covid Patients at Hubli Kims
ಹುಬ್ಬಳ್ಳಿ ಕಿಮ್ಸ್​ನಲ್ಲಿ ಕೋವಿಡ್ ರೋಗಿಗಳಗೆ ಬ್ಲ್ಯಾಕ್ ಫಂಗಸ್ ಪತ್ತೆ

By

Published : May 16, 2021, 8:42 PM IST

ಧಾರವಾಡ:ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಜಿಲ್ಲಾಧಿಕಾರಿಗಳ ವರ್ಚುವಲ್ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ‌ ಆಸ್ಪತ್ರೆಗಳಲ್ಲಿ ಆಯಾ ದಿನದ ಕೋವಿಡ್ ಚಿಕಿತ್ಸೆ, ಆಕ್ಸಿಜನ್, ಬೆಡ್ ಸೇರಿದಂತೆ ಆಸ್ಪತ್ರೆಗಳ ಅಗತ್ಯತೆ ತಿಳಿಯಲು‌ ಪ್ರತಿ ದಿನ ಜಿಲ್ಲಾಧಿಕಾರಿಗಳು ಆಸ್ಪತ್ರೆ ಮುಖ್ಯಸ್ಥರ ಮತ್ತು ಮುಖ್ಯ ವೈದ್ಯರೊಂದಿಗೆ ವರ್ಚುವಲ್ ಸಭೆ ಜರುಗಿಸಿ ಚರ್ಚಿಸುತ್ತಾರೆ ಎಂದು ತಿಳಿಸಿದ್ದಾರೆ.

ಕಿಮ್ಸ್ ಆಸ್ಪತ್ರೆಯ ಇಎನ್​ಟಿ ವಿಭಾಗ ಮುಖ್ಯಸ್ಥ ಡಾ. ರವೀಂದ್ರ ಗದಗ ಅವರು ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವ ಕುರಿತು ವರದಿ ನೀಡಿದ್ದಾರೆ. ಈ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ಇದು ಸಾಂಕ್ರಾಮಿಕ ರೋಗವಲ್ಲದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇಎನ್​ಟಿ ವಿಭಾಗದ ಮುಖ್ಯಸ್ಥ ಡಾ. ರವೀಂದ್ರ ಗದಗ (94481 18494) ನೇತೃತ್ವದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು‌ ಕಿಮ್ಸ್​ ನಿರ್ದೇಶಕರು ತಿಳಿಸಿದ್ದಾರೆ.

ಓದಿ:ಶಾಕಿಂಗ್ ವಿಡಿಯೋ ​: ಗಂಗಾ ನದಿಯಲ್ಲಿ ತೇಲಿ ಬಂದ ಮೃತದೇಹ ತಿಂದ ಶ್ವಾನಗಳು

ABOUT THE AUTHOR

...view details