ಹುಬ್ಬಳ್ಳಿ:ಯುವತಿವೋರ್ವಳ ವೈಯಕ್ತಿಕ ವಿಡಿಯೋ, ಫೋಟೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡಿರುವ ಪ್ರಕರಣವೊಂದು ನಗರದಲ್ಲಿ ಬೆಳಕಿಗೆ ಬಂದಿದೆ.
ನಗರದ ಯುವತಿವೋರ್ವಳ ನಗ್ನ ವಿಡಿಯೋ ಇಟ್ಟುಕೊಂಡು ವ್ಯಕ್ತಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಟೋ ಚಾಲಕನೋರ್ವ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಯುವತಿಯ ನಗ್ನ ವಿಡಿಯೋವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ. ಬಳಿಕ ವಿಡಿಯೋ ತೋರಿಸಿ 25 ಲಕ್ಷ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ವಿಡಿಯೋವನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.