ಹುಬ್ಬಳ್ಳಿ: ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿದ್ಧಾರೂಢ ಮಠದ ಟ್ರಸ್ಟಿಗಳಿಗೆ ಬ್ಲ್ಯಾಕ್‌ಮೇಲ್: ಮೂವರನ್ನು ಬಂಧಿಸಿದ ಪೊಲೀಸರು - ಹುಬ್ಬಳ್ಳಿ ನ್ಯೂಸ್
ಹುಬ್ಬಳ್ಳಿಯ ಸುಪ್ರಸಿದ್ಧ ಸಿದ್ಧಾರೂಢ ಮಠದ ಟ್ರಸ್ಟಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಮೂವರನ್ನು ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಸುಪ್ರಸಿದ್ಧ ಸಿದ್ಧಾರೂಢ ಮಠದ ಟ್ರಸ್ಟಿಯೊಬ್ಬರು ಇನ್ನೊಬ್ಬ ಮಹಿಳಾ ಟ್ರಸ್ಟಿ ಮನೆಯಲ್ಲಿದ್ದಾಗ ಏಕಾಂತ ದೃಶ್ಯ ಸೆರೆ ಹಿಡಿದ ದುಷ್ಕರ್ಮಿಗಳು ಅವರನ್ನು ಬೆದರಿಸಿ ಹತ್ತು ಲಕ್ಷ ರೂಪಾಯಿ ಸುಲಿಗೆ ಮಾಡಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇದರಿಂದ ಬೇಸತ್ತ ಟ್ರಸ್ಟಿ ಹಳೇ ಹುಬ್ಬಳ್ಳಿ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿ ಕಾರ್ಯಾಚರಣೆಗಿಳಿದ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಗಳು ಮಠದ ಸೂಪರ್ವೈಸರ್ ಒಬ್ಬರ ಕುಮ್ಮಕ್ಕಿನ ಮೇರೆಗೆ ಈ ಕೃತ್ಯ ಮಾಡಿದ್ದಾರೆ ಎಂದು ಬಾಯ್ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.