ಹುಬ್ಬಳ್ಳಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ವೊಂದನ್ನು ತೆರೆದು ನೋಡಿದಾಗ ಅದು ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿ ಹುಬ್ಬಳ್ಳಿಯ ಅರಳಿ ಕಟ್ಟಿ ನಿವಾಸಿ ಹುಸೇನ್ ನಾಯಕ್ (23) ಎಂದು ತಿಳಿದು ಬಂದಿದೆ.
ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಅಧಿಕಾರಿಯೊಬ್ಬರು ನಿಂಬೆಹಣ್ಣಿನ ತರಹದ ವಸ್ತು ನೀಡಿದ್ರು. ಅದೇನೆಂದು ನೋಡಲು ತಿಳಿಸಿದರು. ಅದನ್ನು ಒಡೆದೆ. ಕೂಡಲೇ ಬ್ಲಾಸ್ಟ್ ಆಯ್ತು ಎಂದು ಗಾಯಾಳು ಹುಸೇನ್ ನಾಯಕ್ ತಿಳಿಸಿದ್ದಾರೆ.
ಸ್ಥಳಕ್ಕೆ ಆರ್ಪಿಎಫ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನ ದಳದೊಂದಿಗೆ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಫೋಟಗೊಂಡಿದ್ದು ಬಾಂಬ್ ಇರಬಹುದೇ ಅಥವಾ ಮೊಬೈಲ್ ಎಂಬ ಬಗ್ಗೆ ಖಚಿತ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.