ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಪ್ರವೇಶಿಸಿ 40 ವರ್ಷ ಪೂರೈಸಿದ್ದು ವಿಶೇಷ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಬಸವರಾಜ ಹೊರಟ್ಟಿ ಪರಿಷತ್ ಪ್ರವೇಶಿಸಿ 40 ವರ್ಷ: ಹುಬ್ಬಳ್ಳಿಯಲ್ಲಿ ರಕ್ತದಾನ ಶಿಬಿರ - Blood donation camp in hubbali
ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಪ್ರವೇಶಿಸಿ ನಾಲ್ಕು ದಶಕಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಭಾಗಿಯಾದ ವಿಧಾನ ಪರಿಷತ್ ಸದಸ್ಯ ಬಸವರಾಕ ಹೊರಟ್ಟಿ
ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಷ್ಟ್ರೋತ್ಥಾನ ರಕ್ತ ನಿಧಿಯ ಜಂಟಿ ಆಶ್ರಯದಲ್ಲಿ 150ಕ್ಕೂ ಹೆಚ್ಚು ಶಿಕ್ಷಕರು ಶಿಬಿರದಲ್ಲಿ ಪಾಲ್ಗೊಂಡರು.
ಈ ದಿನಗಳನ್ನು ಸಂಭ್ರಮಿಸುವ ಬದಲು ಜನಪರ ಕೆಲಸ ಮಾಡುವುದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ. ಜಿಲ್ಲೆಯಲ್ಲಿ ರಕ್ತದ ಕೊರತೆಯಿದ್ದು ಈ ಶಿಬಿರ ಆಯೋಜಿಸಲಾಗಿದೆ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.