ಹುಬ್ಬಳ್ಳಿ :ನಿರ್ಮಾಣ ಹಂತದ ಮನೆಯೊಂದರ ಗೇಟ್ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಟೂರ ರಸ್ತೆಯ ಗಣೇಶ್ ಕಾಲೋನಿಯ ಮನೆಯೊಂದರ ಸಮೀಪ ಬಾಲಕ ಆಟವಾಡುತ್ತಿದ್ದಾಗ ಘಟನೆ ನಡೆಯಿತು. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಆತ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ಗೇಟ್ ಬಿದ್ದು ಬಾಲಕ ಸಾವು - ಗೇಟ್ ಬಿದ್ದು ಬಾಲಕ ಸಾವು
ಮನೆ ಗೇಟ್ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪ್ರೇಮಿಗಳ ಆತ್ಮಹತ್ಯೆ : ಕುಟುಂಬಸ್ಥರು ವಿರೋಧಿಸಿದ ಕಾರಣ ಮನನೊಂದು ಪ್ರೇಮಿಗಳಿಬ್ಬರು ನಿರ್ಮಾಣ ಹಂತದ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಕಳೆದ ಬುಧವಾರ ನಡೆದಿತ್ತು. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ 22 ವರ್ಷದ ಯುವಕ ಹಾಗೂ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಒಂದೇ ಊರಿನವರಾದ ಇಬ್ಬರು ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರಂತೆ. ಆದರೆ ಬಾಲಕಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದು, ಪ್ರೇಮಿಗಳು ನಾಪತ್ತೆಯಾಗಿದ್ದರು. ಈ ಬಗ್ಗೆ ಬಾಲಕಿಯ ಪೋಷಕರು ಮಗಳು ಕಾಣೆಯಾಗಿದ್ದಾಳೆ ಎಂದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಇದನ್ನೂ ಓದಿ :ವಿಶೇಷಚೇತನ ಮಹಿಳೆ ಮೇಲೆ ವೃದ್ಧನಿಂದ ಅತ್ಯಾಚಾರ.. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ