ಹುಬ್ಬಳ್ಳಿ: ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅವಳಿನಗರದಲ್ಲಿ ಮುಸ್ಲಿಂ ಸಮುದಾಯದವರ ಸಾಮೂಹಿಕ ಪ್ರಾರ್ಥನೆಗೆ ಬ್ರೇಕ್ ಹಾಕಲಾಗಿದೆ.
ಅವಳಿನಗರದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ ಬ್ರೇಕ್ - ಕೊರೊನಾ ಮುನ್ನೆಚ್ಚರಿಕಾ ಕ್ರಮ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಅವಳಿನಗರದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ ಬ್ರೇಕ್
ಪ್ರತಿ ಶುಕ್ರವಾರ ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಮಸೀದಿಯಲ್ಲಿ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದ್ರೆ ಕೊರೊನಾ ಭೀತಿ, ಭಾರತ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಧಾರವಾಡ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ತಮ್ಮ ತಮ್ಮ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಮಸೀದಿಗಳ ಮೌಲ್ವಿಗಳಿಗೆ ಸೂಚನೆ ನೀಡಲಾಗಿದೆ. ಪ್ರಾರ್ಥನೆ, ಸಭೆ ಸಮಾರಂಭಗಳ ಹೆಸರಲ್ಲಿ ಗುಂಪು ಸೇರಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದ್ದು, ಮುಸ್ಲಿಮರ ಪ್ರಾರ್ಥನಾ ಮಂದಿರಗಳನ್ನು ಮುಚ್ಚಲಾಗಿದೆ.