ಹುಬ್ಬಳ್ಳಿ: ಸ್ಯಾನಿಟೈಸರ್ ಕುಡಿದು ಒಂದೇ ದಿನ ಅಕ್ಕ- ತಮ್ಮ ಮೃತಪಟ್ಟಿರುವ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ.
ಬೆಳಗ್ಗೆ ಬಸವರಾಜ್ ಕುರುವಿನಕೊಪ್ಪ ಎಂಬಾತ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ರೆ, ಈಗ ಆತನ ಸಹೋದರಿ ಜಂಬಕ್ಕ ಕಟ್ಟಿಮನಿ(47) ಮೃತಪಟ್ಟಿದ್ದಾಳೆ.
ಲಾಕ್ ಡೌನ್ ಇದ್ದ ಕಾರಣ ಇವರಿಗೆ ಮದ್ಯ ಸಿಕ್ಕಿರಲಿಲ್ಲ. ಹೀಗಾಗಿ ಮದ್ಯ ವ್ಯಸನಿಗಳಾಗಿದ್ದ ಇವರು ಕಳೆದ ಒಂದು ತಿಂಗಳಿಂದ ಮದ್ಯ ಸೇವಿಸಿರಲಿಲ್ಲ. ಕಳೆದ ಮೂರು ದಿನಗಳಿಂದ ಸ್ಯಾನಿಟೈಸರ್ ದಾಸರಾಗಿದ್ದರು. ಬೆಳಗ್ಗೆ ಕಿಮ್ಸ್ ಆಸ್ಪತ್ರೆಯಲ್ಲಿ ತಮ್ಮ ಸಾವನ್ನಪಿದ್ರೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅಕ್ಕನೂ ಕಿಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾಳೆ.
ಇವರಿಬ್ಬರ ಸಾವು ಧಾರವಾಡ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ಈ ಬಗ್ಗೆ ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.