ಹುಬ್ಬಳ್ಳಿ: ಕಟ್ನೂರು ಹಾಗೂ ಮಾವೂರು ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸೇತುವೆ ನಿರ್ಮಿಸಿ ಎಂದು ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಹೇಳಿದರು.
ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸೇತುವೆ ನಿರ್ಮಿಸಿ: ಸಚಿವ ಜಗದೀಶ್ ಶೆಟ್ಟರ್.... - Hubli Bypass Road Works Inspection
ಹುಬ್ಬಳ್ಳಿ ಬೈಪಾಸ್ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಜಗದೀಶ್ ಶೆಟ್ಟರ್ ನಂತರ ಕಟ್ನೂರು ಹಾಗೂ ಮಾವೂರು ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸೇತುವೆ ನಿರ್ಮಿಸಿ ಎಂದು ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಹೇಳಿದರು.
ಇಂದು ಹುಬ್ಬಳ್ಳಿ ಬೈಪಾಸ್ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳೀಯ ಜನರ ಅಗತ್ಯಗಳನ್ನು ಅನುಸರಿಸಿ ಯೋಜನೆ ರೂಪಿಸಬೇಕು. ಯೋಜನೆಯ ಬಗ್ಗೆ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅನುಷ್ಠಾನಗೊಳಿಸಬೇಕು ಎಂದರು.
ಕಟ್ನೂರು ಹಾಗೂ ಮಾವೂರು ಸೇತುವೆ ಕಿರಿದಾಗಿದ್ದು ಜನರು ಕಷ್ಟ ಪಡುವಂತಾಗಿದೆ. ಬೂದಿಹಾಳ ರಸ್ತೆಯಲ್ಲಿ ಸೇತುವೆ ನಿರ್ಮಿಸಿದ್ದರಿಂದ ರೈತರಿಗೆ ತೊಂದರೆಯಾಗಿದೆ. ಇವುಗಳನ್ನು ಸರಿಪಡಿಸಿ ರಸ್ತೆ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮೌಖಿಕವಾಗಿ ಆದೇಶಿಸಿದರು.