ಕರ್ನಾಟಕ

karnataka

ETV Bharat / state

ಕಟ್ಟಡ ಕುಸಿತ ಪ್ರಕರಣ: ಘಟನಾ ಸ್ಥಳಕ್ಕೆ ದೇಶಪಾಂಡೆ ಭೇಟಿ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರ್.ವಿ.ದೇಶಪಾಂಡೆ ಭೇಟಿ ನೀಡಿ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದುಕೊಂಡರು.

ಧಾರವಾಡದ ಕಟ್ಟಡ ಕುಸಿತ ಸ್ಥಳಕ್ಕೆ ಸಚಿವ ಆರ್.ವಿ ದೇಶಪಾಂಡೆ ಭೇಟಿ

By

Published : Mar 20, 2019, 11:39 AM IST

ಧಾರವಾಡ:ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಸಚಿವ ಆರ್.ವಿ.ದೇಶಪಾಂಡೆ ಭೇಟಿ ನೀಡಿ ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ದೇಶಪಾಂಡೆ, ಇದೊಂದು ದೊಡ್ಡ ದುರ್ಘಟನೆ. ಕಟ್ಟಡ ಕುಸಿದು ಮೂರು ಜನ ಸಾವನ್ನಪ್ಪಿದ್ದಾರೆ. ಒಟ್ಟು ಕೆಎಂಸಿಯಲ್ಲಿ 16, ಎಸ್​ಡಿಎಂ‌ನಲ್ಲಿ 6, ಜಿಲ್ಲಾಸ್ಪತೆಯಲ್ಲಿ 31 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 54 ಜನರು ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬರು ಐಸಿಯುನಲ್ಲಿದ್ದಾರೆ.‌ಇವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಧಾರವಾಡದ ಕಟ್ಟಡ ಕುಸಿತ ಸ್ಥಳಕ್ಕೆ ಸಚಿವ ಆರ್.ವಿ ದೇಶಪಾಂಡೆ ಭೇಟಿ

ಸರ್ಕಾರ ಈ ಕುರಿತು ತಜ್ಞರಿಂದ ಸಮಗ್ರ ತನಿಖೆ ನಡೆಸಲಿದೆ. ಆರೋಪಿಗಳ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.ಸಂಪೂರ್ಣ ಕಾರ್ಯಾಚರಣೆ ನಂತರ ಪರಿಹಾರದ ಬಗ್ಗೆ ತಿರ್ಮಾನಿಸಲಾಗುವುದು ಎಂದರು.

ABOUT THE AUTHOR

...view details