ಹುಬ್ಬಳ್ಳಿ: ಧಾರಾಕಾರ ಮಳೆ ಪರಿಣಾಮ ಧಿಡೀರ್ ರಸ್ತೆ ಕುಸಿದಿದ್ದು, ಬಸ್ ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿರುವ ಘಟನೆ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ದಿಢೀರ್ ಕುಸಿದ ರಸ್ತೆ: ಸಮಯಪ್ರಜ್ಞೆಯಿಂದ 20ಕ್ಕೂ ಹೆಚ್ಚು ಜನರ ಪ್ರಾಣ ಉಳಿಸಿದ ಬಸ್ ಚಾಲಕ
ಧಾರಾಕಾರ ಮಳೆ ಪರಿಣಾಮ ದಿಢೀರ್ ರಸ್ತೆ ಕುಸಿದಿದ್ದು, ಬಸ್ ಚಾಲಕನ ಸಮಯಪ್ರಜ್ಞೆಯಿಂದ ಮುಂದಾಗುತ್ತಿದ್ದ ಅನಾಹುತ ತಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಗಿರಿಯಾಲದಿಂದ ಚನ್ನಾಪುರ ಮಾರ್ಗವಾಗಿ ಹುಬ್ಬಳ್ಳಿಗೆ ಬರುತ್ತಿದ್ದ ನಗರದ ಸಾರಿಗೆ ಬಸ್, ಚನ್ನಾಪುರ ಗ್ರಾಮದ ಕೆರೆ ಪಕ್ಕದ ರಸ್ತೆಯಲ್ಲಿ ಬರುವಾಗ ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಏಕಾಏಕಿ ರಸ್ತೆ ಕುಸಿದಿದೆ. ಈ ವೇಳೆ ಬಸ್ ಪಲ್ಟಿಯಾಗುವ ಸಾಧ್ಯತೆ ಇತ್ತು. ತಕ್ಷಣ ಪರಿಸ್ಥಿತಿ ಅರಿತ ಚಾಲಕ ಬಸ್ ಬೃಹತ್ ತಗ್ಗಿಗೆ ಬೀಳುವುದನ್ನು ತನ್ನ ಸಮಯ ಪ್ರಜ್ಞೆಯಿಂದ ನಿಯಂತ್ರಿಸಿದ್ದಾನೆ.
ಇದರಿಂದಾಗಿ ಬಸ್ಸಿನಲ್ಲಿದ್ದ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ. ಬಸ್ ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.