ಕರ್ನಾಟಕ

karnataka

ETV Bharat / state

ಗ್ರಾಪಂಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಇಂದು ಉಪಚುನಾವಣೆ.. ಮತಕ್ಷೇತ್ರ ವ್ಯಾಪ್ತಿಯಲ್ಲಿ ವೇತನ ಸಹಿತ ರಜೆ - ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಇಂದು ಉಪಚುನಾವಣೆ

ಅರ್ಹ ಮತದಾರ ನೌಕರರಿಗೆ ಇಂದು ಉಪ ಚುನಾವಣೆ ಹಿನ್ನೆಲೆ ಕರ್ನಾಟಕ ಪಂಚಾಯತ್ ರಾಜ್ ನಿಯಮಗಳ ಅಡಿಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ.

Dharwada
ಧಾರವಾಡ

By

Published : Oct 28, 2022, 7:22 AM IST

ಧಾರವಾಡ:ಕರ್ನಾಟಕ ರಾಜ್ಯ ಚುನಾವಣಾ ಆಯೋಗವು 2022ರ ಆಗಸ್ಟ್ 2022ರ ನವೆಂಬರ್ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಿಸಿದ್ದು, ಚುನಾವಣಾ ವೇಳಾ ಪಟ್ಟಿಯಂತೆ ಇಂದು ಮತದಾನ ನಡೆಯಲಿದೆ.

ಸಾರ್ವತ್ರಿಕ ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಶ್‍ಮೆಂಟ್‍ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಇಂದು ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳ ಅಡಿ ಜಿಲ್ಲಾ ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ, ಎಲ್ಲ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ಸರ್ಕಾರದ ಅಪರ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ.

ಅದರಂತೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣ ಪಂಚಯಿತಿಯ ವಾರ್ಡ್ ನಂ.14 ಮತ್ತು ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮ ಪಂಚಾಯಿತಿಯಲ್ಲಿ 2ನೇ ವಾರ್ಡ್, ಶಿವಳ್ಳಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್, ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮ ಪಂಚಾಯಿತಿಯ ಗಂಗಿವಾಳ, ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮ ಪಂಚಾಯಿತಿಯಲ್ಲಿ 2ನೇ ವಾರ್ಡ್, ನವಲಗುಂದ ತಾಲೂಕಿನ ಹಾಳ ಕುಸುಗಲ್ ಗ್ರಾಮ ಪಂಚಾಯಿತಿಯ ಹಾಳಕುಸುಗಲ್ 2ನೇ ವಾರ್ಡ್, ಮತ್ತು ಯಮನೂರ ಗ್ರಾಮ ಪಂಚಾಯಿತಿಯ ಅರೇಕುರಹಟ್ಟಿ ವಾರ್ಡ್ ನಂ.1, 2ನೇ ವಾರ್ಡ್, 3ನೇ ವಾರ್ಡ್ ಮತ್ತು ಕುಂದಗೋಳ ತಾಲ್ಲೂಕಿನ ಬರದ್ವಾಡ ಗ್ರಾಮ ಪಂಚಾಯಿತಿಯ ಬರದ್ವಾಡ 1ನೇ ವಾರ್ಡ್, 2ನೇ ವಾರ್ಡ್ ಸೇರಿದಂತೆ ಒಟ್ಟು 19 ಸ್ಥಾನಗಳನ್ನು ತುಂಬಲು ಉಪ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ:ಅರಸೀಕೆರೆ ನಗರಸಭೆ 7 ವಾರ್ಡ್​ಗಳ ಉಪಚುನಾವಣೆ: ಹೈಕೋರ್ಟ್ ತಾತ್ಕಾಲಿಕ ತಡೆ

ABOUT THE AUTHOR

...view details