ಹುಬ್ಬಳ್ಳಿ:ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ. ನೂತನ ಶಾಸಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಏನು ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಸಂಪುಟ ವಿಸ್ತರಣೆ ಬಗ್ಗೆ ಡಿಸಿಎಂಗಳಾದ ಸವದಿ, ಕಾರಜೋಳ ಪ್ರತಿಕ್ರಿಯೆ.. ನಗರದ ಖಾಸಗಿ ಹೋಟೆಲ್‌ನಲ್ಲಿ ಅಮಿತ್ ಶಾ ಭೇಟಿಯಾದ ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಹಾಗೂ ಅಮಿತ್ ಶಾ ಅವರಿಗೆ ಬಿಟ್ಟಿದ್ದು. ಆದಷ್ಟು ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನೂತನ ಶಾಸಕರಲ್ಲಿ ಯಾವುದೇ ಅಸಮಾಧಾನವಿಲ್ಲ. ಈಗ ಮುಹೂರ್ತ ಕೂಡಿ ಬಂದಿಲ್ಲ. ಶೀಘ್ರವೇ ಸಂಪುಟ ವಿಸ್ತರಣೆಯಾಗಲಿದೆ ಎಂದರು.
ಧನುರ್ಮಾಸ ಇದ್ದಿದ್ದಕ್ಕೆ ಸಂಪುಟ ವಿಸ್ತರಣೆ ಆಗಿಲ್ಲ. ಸಿಎಂ ವಿದೇಶ ಪ್ರವಾಸದಿಂದ ಬಂದ ನಂತರ ಸಂಪುಟ ವಿಸ್ತರಣೆಯಾಗಲಿದೆ. ಅಮಿತ್ ಶಾ ಇವತ್ತು ಸಮಸ್ಯೆಗಳನ್ನು ಆಲಿಸಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿಲ್ಲ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗುತ್ತದೆ. ಶಾಸಕ ರಮೇಶ್ ಜಾರಕಿಹೊಳಿ ಅಮಿತ್ ಶಾರನ್ನು ಭೇಟಿ ಆಗಿದ್ದಾರೆ. ಅವರು ಭೇಟಿಯಾದಾಗ ನಾನಿದ್ದೆ ಎಂದು ಸ್ಪಷ್ಟಪಡಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ನಾನು ಯಾರನ್ನು ಭೇಟಿ ಆಗಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.