ಕರ್ನಾಟಕ

karnataka

ETV Bharat / state

ಸಚಿವ ಸಂಪುಟ ವಿಸ್ತರಣೆ, ಪುನರ್‌ರಚನೆ ಸಿಎಂ ಪರಮಾಧಿಕಾರ: ಜಗದೀಶ್ ಶೆಟ್ಟರ್ - ಬಿ.ಎಸ್.ಯಡಿಯೂರಪ್ಪ ದುರ್ಬಲ ಸಿಎಂ

ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ಅಲ್ಲದೇ ಸಿಎಂ ಕೂಡ ಖಾತೆ ಹಂಚಿಕೆ ಮಾಡೋದಾಗಿ ಹೇಳಿದ್ದಾರೆ. ಇನ್ನೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆಂಬುದರ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಜಗದೀಶ್​ ಶೆಟ್ಟರ್​ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

Jagdish Shetter
ಸಚಿವ ಜಗದೀಶ್​ ಶೆಟ್ಟರ್

By

Published : Feb 9, 2020, 8:32 PM IST

ಹುಬ್ಬಳ್ಳಿ:ಸಚಿವ ಸಂಪುಟ ವಿಸ್ತರಣೆ, ಪುನರ್ ರಚನೆ ಸಿಎಂ ಪರಮಾಧಿಕಾರ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ಸಿಎಂ ಕೂಡ ಖಾತೆ ಹಂಚಿಕೆ ಮಾಡೋದಾಗಿ ಹೇಳಿದ್ದಾರೆ. ಇನ್ನೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆಂಬುದರ ಬಗ್ಗೆ ಮಾಹಿತಿ ಇಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳಿಗೆ ಸಲಹೆ ನೀಡುವ ಮಾತೇ ಇಲ್ಲ ಎಂದರು.

ಸಚಿವ ಜಗದೀಶ್​ ಶೆಟ್ಟರ್

ಬಿ.ಎಸ್.ಯಡಿಯೂರಪ್ಪ ದುರ್ಬಲ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಮಾತಿಗೆ ಉತ್ತರ ಕೊಡೋಕೆ ಆಗಲ್ಲ. ಅಲ್ಲದೇ ಕಾಂಗ್ರೆಸ್​ನಲ್ಲಿ ಅಧ್ಯಕ್ಷಗಿರಿಗಾಗಿ ಹೊಡೆದಾಟ ನಡೆಯುತ್ತಿದೆ. ಸಿದ್ದರಾಮಯ್ಯ ನಾಯಕತ್ವ ಹಾಗೂ ಕೈ ನಾಯಕತ್ವ ದುರ್ಬಲವಿದೆ. ಮೊದಲು ದುರ್ಬಲರು ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.

ಬಜೆಟ್​​ನಲ್ಲಿ ಉತ್ತರ ಕರ್ನಾಟಕದ ಭಾಗದ ಅಭಿವೃದ್ಧಿಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಈಗಾಗಲೇ ಕರ್ನಾಟಕದಲ್ಲಿ ಹಣ ಹೂಡಿಕೆಗೆ ಸಾವಿರಕ್ಕೂ ಹೆಚ್ಚು ಹೂಡಿಕೆದಾರರನ್ನು ಕರೆಯಲಾಗಿದೆ ಎಂದರು.

ABOUT THE AUTHOR

...view details