ಕರ್ನಾಟಕ

karnataka

ಹು - ಧಾ ಮಹಾನಗರ ಪಾಲಿಕೆಯಿಂದ ಖಾಲಿ ನಿವೇಶನಗಳ ಸ್ವಚ್ಛತೆಗೆ ಅಭಿಯಾನ

By

Published : Jun 2, 2022, 6:31 PM IST

ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಹು-ಧಾ ಮಹಾನಗರ ಪಾಲಿಕೆಯು ನಮ್ಮ ನಗರ ಸ್ವಚ್ಛ ನಗರ ಎಂಬ ಅಭಿಯಾನವನ್ನು ಆರಂಭಿಸಿದೆ. ಈ ಮೂಲಕ ನಗರದಲ್ಲಿರುವ ಖಾಲಿ ನಿವೇಶನಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಲು ಪಾಲಿಕೆ ಮುಂದಾಗಿದೆ.

campaign-for-the-cleanup-of-open-land-by-hudha-muncipality
ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಖಾಲಿ ನಿವೇಶನದ ಸ್ವಚ್ಛತೆಗೆ ಅಭಿಯಾನ

ಹುಬ್ಬಳ್ಳಿ : ಇದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಸಾಕಷ್ಟು ಯೋಜನೆಯ ಮೂಲಕ ಸ್ವಚ್ಛ ನಗರದ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವ ಪಾಲಿಕೆ. ಇದೀಗ ಅನಧಿಕೃತ ಕಟ್ಟಡಗಳಿಗೆ ಹಾಗೂ ಅಕ್ರಮವಾಗಿ ಒತ್ತುವರಿ ಮಾಡಿರುವ ನಿವೇಶನದ ಮಾಲೀಕರಿಗೆ ಬಿಸಿ ಮುಟ್ಟಿಸಲು ಪಾಲಿಕೆ ಮುಂದಾಗಿದೆ.

ಎಲ್ಲರೂ ಸ್ವಂತಕ್ಕೊಂದು ಮನೆ ಇರಬೇಕು ಎಂದು ಆಸೆ ಪಡುವುದು ಸರ್ವೇಸಾಮಾನ್ಯ. ಆದರೆ, ಕೆಲವರು ಅಗತ್ಯಕ್ಕಿಂತ ಹೆಚ್ಚು ಸೈಟ್ ಖರೀದಿಸಿ ಅವುಗಳನ್ನು ಖಾಲಿ ಬಿಟ್ಟಿರುತ್ತಾರೆ. ಇಂತಹ ಸೈಟ್‌ಗಳು ಇಂದು ಅಕ್ಕಪಕ್ಕದ ನಿವಾಸಿಗಳಿಗೆ ಮತ್ತು ಹು-ಧಾ ಮಹಾನಗರ ಪಾಲಿಕೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಹೀಗಾಗಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಹು-ಧಾ ಮಹಾನಗರ ಪಾಲಿಕೆ ಹೊಸ ಅಭಿಯಾನ ಆರಂಭಿಸಿದೆ.

ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಖಾಲಿ ನಿವೇಶನದ ಸ್ವಚ್ಛತೆಗೆ ಅಭಿಯಾನ

ಹು-ಧಾ ಮಹಾನಗರ ವ್ಯಾಪ್ತಿಯಲ್ಲಿ ಖಾಲಿ ಸೈಟ್ ಗಳದ್ದೇ ದೊಡ್ಡ ಸಮಸ್ಯೆಯಾಗಿದೆ. ಊರು - ಕೇರಿಗಳಲ್ಲಿ ಖಾಲಿ ನಿವೇಶನ ಇರುವುದೇ ಕಸ ಹಾಕಲು ಎಂಬ ಭಾವನೆ ಇಂದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಿವೇಶನಗಳು ತಿಪ್ಪೆ ಗುಂಡಿಯಾಗಿ ಮಾರ್ಪಾಡಾಗುತ್ತಿವೆ. ಕ್ರಮೇಣವಾಗಿ ಖಾಲಿ ನಿವೇಶನದಲ್ಲಿ ಮುಳ್ಳುಗಂಟಿಯ ಪೊದೆ ಬೆಳೆದು, ಬಿಡಾಡಿ ದನ, ಹಂದಿ, ನಾಯಿಗಳ ಆಶ್ರಯತಾಣವಾಗಿ ಮಾರ್ಪಾಡಾಗಿದೆ. ಜೊತೆಗೆ ಸೊಳ್ಳೆಗಳು ನೆಲೆಯಾಗಿ ಇಡೀ ಪ್ರದೇಶದ ಆರೋಗ್ಯ ಕೆಡಿಸುತ್ತಿವೆ.‌ ಈ ನಿಟ್ಟಿನಲ್ಲಿ ಪಾಲಿಕೆ ಕಾರ್ಯಾಚರಣೆಗೆ‌ ಮುಂದಾಗಿದೆ.

ಪಾಲಿಕೆಯಿಂದ ನಮ್ಮ ನಗರ ಸ್ವಚ್ಛ ನಗರ ಅಭಿಯಾನ : ಇನ್ನೂ ಹು-ಧಾ ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಈ ಸಂದರ್ಭದಲ್ಲಿ ನಗರದಲ್ಲಿನ ಖಾಲಿ ನಿವೇಶನಗಳು ಅವ್ಯವಸ್ಥೆ ಆಗರವಾಗಿ ಮಾರ್ಪಟ್ಟಿವೆ. ಹೀಗಾಗಿ ನಗರದಲ್ಲಿ ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ಪಾಲಿಕೆ ನಮ್ಮ ನಗರ ಸ್ವಚ್ಛ ನಗರ ಎಂಬ ಅಭಿಯಾನ ಆರಂಭಿಸಿದೆ. ಈ ಮೂಲಕ ಖಾಲಿ ನಿವೇಶನಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ಕಾರ್ಯ ಮಾಡದ ಮಾಲೀಕರಿಗೆ ಪಾಲಿಕೆ ಪಾಠ ಕಲಿಸಲು ಪಾಠ ಪಾಲಿಕೆ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಅಂತಹ ನಿವೇಶನಗಳ ಮಾಲೀಕರಿಗೆ ನೋಟಿಸ್‌ ನೀಡಿ, 7 ದಿನಗಳೊಳಗಾಗಿ ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಚಗೊಳಿಸುವಂತೆ ಸೂಚಿಸಲಾಗಿದೆ. ಒಂದೊಮ್ಮೆ ಖಾಲಿ ನಿವೇಶನಗಳನ್ನು ಮಾಲೀಕರು ಸ್ವಚ್ಚಗೊಳಿಸದೆ ಹಾಗೆಯೇ ಬಿಟ್ಟರೆ ಪಾಲಿಕೆಯೇ ಸ್ವಚ್ಛಗೊಳಿಸಲು ಕ್ರಮ ವಹಿಸಿ, ಅದಕ್ಕೆ ತಗಲುವ ವೆಚ್ಚವನ್ನು ಮಾಲೀಕರಿಂದ ಆಸ್ತಿ ಕಂದಾಯದ ಜತೆಗೆ, ಖಾಲಿ ನಿವೇಶನದ ಸ್ವಚ್ಛತಾ ಶುಲ್ಕವಾಗಿ ವಸೂಲಿ ಮಾಡಲು ಮುಂದಾಗಿದೆ.

ಒಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ ಕಾರ್ಯಾಚರಣೆ ಚುರುಕು ಮಾಡಿರುವ ಪಾಲಿಕೆ ಈಗ ಮಹತ್ವದ ನಿರ್ಧಾರವನ್ನು ಕೈಗೊಂಡಿರುವುದು ವಿಶೇಷವಾಗಿದೆ. ಹೀಗೆ ಅನಧಿಕೃತ, ಅಕ್ರಮ ಕಟ್ಟಡಗಳ ಹಾಗೂ ನಿವೇಶನಗಳಿಗೆ ಬ್ರೇಕ್ ಹಾಕುವ ಕಾರ್ಯವನ್ನು ಮಾಡಬೇಕಿದೆ.

ಓದಿ :ಟಿಕೆಟ್ ಬಗ್ಗೆ ಸಿದ್ದು- ಡಿಕೆಶಿ ದೂಷಿಸಬೇಡಿ, ಆಂತರಿಕ ಅಸಮಾಧಾನದಿಂದ ಪಕ್ಷಕ್ಕೆ ಹಾನಿ: ಸುರ್ಜೇವಾಲಾ ಪಾಠ

For All Latest Updates

TAGGED:

ABOUT THE AUTHOR

...view details