ಧಾರವಾಡ:ಈಗಾಗಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಕಾಂಗ್ರೆಸ್ ಮತ್ತು ಜೆಡಿಎಸ್ನಲ್ಲಿ ಬಹುತೇಕ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದರೆ, ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು ಮುಂದುವರಿಸಿದೆ. ಎಲ್ಲಾ ಪಕ್ಷಗಳಲ್ಲಿ ಪ್ರಚಾರ ಭರಾಟೆ ಆರಂಭವಾಗಿದೆ.
ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರಕ್ಕೆ ಇನ್ನೂ ಕಾಂಗ್ರೆಸ್ ಟಿಕೆಟ್ ಹಂಚಿಕೆಯಾಗಿಲ್ಲಾ, ಆದರೆ ಟಿಕೆಟ್ ಅನೌನ್ಸ್ ಗೂ ಮೊದಲೇ ಪ್ರಚಾರ ಶುರುವಾಗಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮುನ್ನವೇ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಅವರ ಪತ್ನಿ ಪ್ರೇಮ ಕೋನರೆಡ್ಡಿ ಪ್ರಚಾರ ಕಾರ್ಯ ಶುರು ಮಾಡಿಕೊಂಡಿದ್ದಾರೆ.
ಈಗಾಗಲೇ ನವಲಗುಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಕಳೆದ ಬಾರಿ ಜೆಡಿಎಎಸ್ನಿಂದ ಕಣಕ್ಕೆ ಇಳಿದಿದ್ದರು. ಇದೀಗ ನವಲಗುಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ಗೆ ಕೋನರೆಡ್ಡಿ ಹಾಗೂ ವಿನೋದ ಅಸೂಟಿ ನಡುವೆ ಫೈಟ್ ಜೋರಾಗಿದೆ. ಕೋನರೆಡ್ಡಿ ಬೆಂಗಳೂರಿನಲ್ಲಿ ಟಿಕಾಣಿ ಹೂಡಿದರೆ, ಅವರ ಪತ್ನಿ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಮೂರನೇ ಪಟ್ಟಿಯಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂದು ನಿರ್ಧಾರ ಮಾಡಲಾಗುತ್ತದೆ. ಇದರ ಬೆನ್ನಲ್ಲೇ ವಾಹನಕ್ಕೆ ಪೂಜೆ ಸಲ್ಲಿಸಿ ಪ್ರಚಾರ ಆರಂಭ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿದೆ.
ಇದನ್ನೂ ಓದಿ:ಟಿಕೆಟ್ ಘೋಷಣೆಗೆ ಮುನ್ನವೇ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಂದ ಮತ ಪ್ರಚಾರ