ಹುಬ್ಬಳ್ಳಿ: ಎನ್.ಪಿ.ಎಸ್, ಜ್ಯೋತಿ ಸಂಜೀವಿನಿ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಕ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಂಜೆ ಕೂಡ ಕಪ್ಪು ಪಟ್ಟಿ ಧರಿಸಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಮೇಣದ ಬತ್ತಿ ಹಿಡಿದು ಕಿಮ್ಸ್ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ..! - candle protest hubli
ಕಿಮ್ಸ್ ಶುಶ್ರೂಷಕ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಸಿಬ್ಬಂದಿ ಇಂದು ಸಂಜೆ ಕೂಡ ಕಪ್ಪು ಪಟ್ಟಿ ಧರಿಸಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಮೇಣದ ಬತ್ತಿ ಪ್ರತಿಭಟನೆ
ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯ ಕುಟುಂಬ ಕಲ್ಯಾಣ ಇಲಾಖೆಗೆ ಇದ್ದು ನಮಗೂ ನೀಡಿ ಎಂದು ಒತ್ತಾಯಿಸಿದರು.