ಬೈಕ್ ಹಾಗೂ ಕಾರು ನಡುವೆ ಡಿಕ್ಕಿ... ಬೈಕ್ ಸವಾರರ ಸಾವು
ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರರು ಮೃತಪಟ್ಟಿರುವ ಘಟನೆ, ಅದರಗುಂಚಿ ಗ್ರಾಮದ ಬಳಿ ನಡೆದಿದೆ.
ಬೈಕ್ ಹಾಗೂ ಕಾರು ನಡುವೆ ಡಿಕ್ಕಿ
ಹುಬ್ಬಳ್ಳಿ:ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ, ತಾಲೂಕಿನ ಅದರಗುಂಚಿ ಗ್ರಾಮದ ಬಳಿ ನಡೆದಿದೆ. ಕೊಟಗೊಂಡಹುಣಸಿ ಗ್ರಾಮದ ನಿವಾಸಿ ಮಂಜುನಾಥ ಯಲ್ಲಪ್ಪ ಸರಾವರಿ (24) ಮೃತ ದುರ್ದೈವಿಯಾಗಿದ್ದು, ತನ್ನ ಗ್ರಾಮದಿಂದ ನೂಲ್ವಿಗೆ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ, ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.