ಧಾರವಾಡ: ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಬೈಪಾಸ್ ಯರಿಕೊಪ್ಪ ಡೌನಲ್ ಬಳಿ ಸಂಭವಿಸಿದೆ.
ಮೃತರಲ್ಲಿ ಓರ್ವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಚಿತ್ರದುರ್ಗದ ರಾಷ್ಟ್ರೀಯ ಭೂಸ್ವಾಧೀನ ಅಧಿಕಾರಿ ಮಧು ಪುಟ್ಟಪ್ಪ (42) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ, ಬೆಳಗಾವಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಟ್ಯಾಂಕರ್ ಕಾರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಧಾರವಾಡದಲ್ಲಿ ಭೀಕರ ಅಪಘಾತ: ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು - Car and tanker accident in dharwad
ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಬೈಪಾಸ್ ಯರಿಕೊಪ್ಪ ಡೌನಲ್ ಬಳಿ ಸಂಭವಿಸಿದೆ.
ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ
ಕಾರು ಚಾಲಕ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.