ಕರ್ನಾಟಕ

karnataka

ಕಾರಿಗೆ ಬೈಕ್ ಡಿಕ್ಕಿ: ಹುಬ್ಬಳ್ಳಿಯಲ್ಲಿ ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

By

Published : Nov 5, 2019, 11:42 PM IST

ಕಾರಿಗೆ ಬೈಕ್​​​ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಸಂಭವಿಸಿದೆ.

ಹುಬ್ಬಳ್ಳಿಯಲ್ಲಿ ಕಾರಿಗೆ ಬೈಕ್ ಡಿಕ್ಕಿ

ಹುಬ್ಬಳ್ಳಿ:ಕಾರಿಗೆ ಬೈಕ್​​​ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಸಿಂಗ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಮೃತ ಹಾಗೂ ಗಾಯಗೊಂಡ ಯುವಕರು ಆಂಧ್ರಪ್ರದೇಶದ ಮೂಲದವರು ಎನ್ನಲಾಗ್ತಿದ್ದು, ಹೆಸರು ತಿಳಿದು ಬಂದಿಲ್ಲ. ನವಲಗುಂದದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details