ಕರ್ನಾಟಕ

karnataka

ETV Bharat / state

ಶಾರ್ಟ್ ಸರ್ಕ್ಯೂಟ್​: ಹುಬ್ಬಳ್ಳಿಯಲ್ಲಿ ಧಗ ಧಗನೆ ಹೊತ್ತಿ ಉರಿದ ಕಾರು - ಶಾರ್ಟ್ ಸರ್ಕ್ಯೂಟ್​ನಿಂದ ಕಾರಿಗೆ ಬೆಂಕಿ

ಹುಬ್ಬಳ್ಳಿಯಿಂದ ಹೊರಟ್ಟಿದ್ದ ಕಾರು ಇದಾಗಿದೆ. ಯಾರಿಗೆ ಸೇರಿದ್ದು, ಎಲ್ಲಿಗೆ ತೆರಳುತ್ತಿತ್ತು ಎಂಬುದರ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ..

Car burnt by short circuit in Hubli
ಶಾರ್ಟ್ ಸರ್ಕ್ಯೂಟ್​ನಿಂದ ಕಾರಿಗೆ ಬೆಂಕಿ ಹುಬ್ಬಳ್ಳಿಯಲ್ಲಿ ನಡುರಸ್ತೆಯಲ್ಲಿ ಕಾರಿಗೆ ಬೆಂಕಿ

By

Published : Dec 5, 2021, 3:06 PM IST

ಹುಬ್ಬಳ್ಳಿ :ಇಂಜಿನ್​​ನಲ್ಲಿ ಬೆಂಕಿ ಕಾಣಿಸಿದ ಪರಿಣಾಮ ನಡುರಸ್ತೆಯಲ್ಲಿಯೇ ಕಾರೊಂದು ಧಗ ಧಗನೆ ಹೊತ್ತಿ ಉರಿದ ಘಟನೆ ನಗರದ ಹೊರ ವಲಯದ ಗಬ್ಬೂರಿನ ಆರ್​​ಟಿಒ ಕಚೇರಿಯ ಬಳಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್​​ನಿಂದ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು..

ಚಾವರ್ಲೆಟ್ ಟವೆರಾ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದಲೇ ಕಾರಿನಲ್ಲಿ ಬೆಂಕಿ ಕಾಣಿಸಿದೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿಯಿಂದ ಹೊರಟ್ಟಿದ್ದ ಕಾರು ಇದಾಗಿದೆ. ಯಾರಿಗೆ ಸೇರಿದ್ದು, ಎಲ್ಲಿಗೆ ತೆರಳುತ್ತಿತ್ತು ಎಂಬುದರ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ : ಮಾಜಿ ಸಿಎಂ ಹೆಚ್​​​​ಡಿಕೆ

ABOUT THE AUTHOR

...view details