ಹುಬ್ಬಳ್ಳಿ:ಪರಿಶುದ್ಧ ಬೆಳಕು, ಗಾಳಿ, ನೀರು ಮತ್ತು ಆಹಾರದಿಂದ ಮಾತ್ರ ಗುಣಮಟ್ಟದ ಆರೋಗ್ಯ ಕಾಪಾಡಲು ಸಾಧ್ಯ. ಹೀಗಾಗಿ ಆಹಾರದಲ್ಲಿ ಪ್ಲಾಸ್ಟಿಕ್ ಸೇರದಂತೆ ಜಾಗೃತಿ ವಹಿಸಬೇಕು ಎಂದು ಗ್ರೀನ್ ಕರ್ನಾಟಕ ಅಸೋಸಿಯೇಷನ್ ಚೇರ್ಮನ್ ಚೆನ್ನು ಹೊಸಮನಿ ಹೇಳಿದರು.
ಪ್ರತಿಯೊಬ್ಬರು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಕೈಜೋಡಿಸಿ: ಚೆನ್ನು ಹೊಸಮನಿ - ಹುಬ್ಬಳ್ಳಿ ಲೇಟೆಸ್ಟ್ ನ್ಯೂಸ್ ಪ್ಲಾಸ್ಟಿಕ್ ಮುಕ್ತ ಭಾರತ ಜನಜಾಗೃತಿ ಅಭಿಯಾನ ಕಾರ್ಯಕ್ರಮ
ಆಹಾರದಲ್ಲಿ ಪ್ಲಾಸ್ಟಿಕ್ ಸೇರದಂತೆ ಜಾಗೃತಿ ವಹಿಸಬೇಕು ಎಂದು ಹುಬ್ಬಳ್ಳಿಯಲ್ಲಿ ಗ್ರೀನ್ ಕರ್ನಾಟಕ ಅಸೋಸಿಯೇಷನ್ ಚೇರ್ಮನ್ ಚೆನ್ನು ಹೊಸಮನಿ ಹೇಳಿದರು.
ನಗರದ ಎಸ್.ಜೆ.ಎಂ.ವಿ.ಎಸ್ ಕಲಾ ಹಾಗೂ ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ಲಾಸ್ಟಿಕ್ ಮುಕ್ತ ಭಾರತ ಜನಜಾಗೃತಿ ಅಭಿಯಾನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ಮನೆಯಲ್ಲಿ ಅಡುಗೆ ಮಾಡುವಾಗ ಪ್ಲಾಸ್ಟಿಕ್ ಸುಡುವುದನ್ನು ತ್ಯಜಿಸಬೇಕು. ಅದರಿಂದ ಹೊರಬರುವ ವಿಷಕಾರಿ ಅನಿಲದಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತು ಏರ್ಪಡಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರಗಳನ್ನು ವಿತರಣೆ ಮಾಡಲಾಯಿತು.