ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರು ಜನ ಆರೋಪಿಗಳನ್ನು ಮಾ. 7ರ ವರೆಗೆ ಸಿಬಿಐ ವಶಕ್ಕೆ ನೀಡಿ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಧಾರವಾಡ ಯೋಗೀಶಗೌಡ ಹತ್ಯೆ ಪ್ರಕರಣ: ಆರೋಪಿಗಳು 5 ದಿನ ಸಿಬಿಐ ವಶಕ್ಕೆ - Dharwad latest crime news
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರು ಜನ ಆರೋಪಿಗಳನ್ನು 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಧಾರವಾಡ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ದಿನೇಶ್, ಸುನೀಲಕುಮಾರ, ನೂತನ್, ಅಶ್ವತ್, ಶಾನವಾಜ್, ನಜೀರ್ ಅಹ್ಮದ ಬಂಧಿತ ಆರೋಪಿಗಳು. 2016ರ ಜೂನ್ 15ರಂದು ಯೋಗೀಶಗೌಡ ಅವರನ್ನು ಧಾರವಾಡದ ಸಪ್ತಾಪುರ ಜಿಮ್‌ನಲ್ಲಿ ಕೊಲೆ ನಡೆದಿತ್ತು. ಸ್ಥಳೀಯ ಪೊಲೀಸರ ತನಿಖೆಯಲ್ಲಿ ಬಸವರಾಜ್ ಮುತ್ತಗಿ ಸೇರಿ 6 ಜನ ಆರೋಪಿಗಳಾಗಿದ್ರು. ಆದ್ರೆ ಸಿಬಿಐ ತನಿಖೆಯಲ್ಲಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ನಿನ್ನೆ ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು 6 ಜನ ಆರೋಪಿಗಳನ್ನು ಬಂಧಿಸಿದ್ದರು.
ಆರೋಪಿಗಳನ್ನು ಭಾನುವಾರ ರಾತ್ರಿ ಬೆಂಗಳೂರಿನಿಂದ ಧಾರವಾಡಕ್ಕೆ ಕರೆ ತಂದಿದ್ದು, ನಿನ್ನೆ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ, ಹೆಚ್ಚಿನ ತನಿಖೆ ಹಿನ್ನೆಲೆ ಸಿಬಿಐ ವಶಕ್ಕೆ ನೀಡುವಂತೆ ಕೋರಲಾಗಿತ್ತು. ಈ ಹಿನ್ನೆಲೆ ನ್ಯಾಯಾಧೀಶರು 5 ದಿನಗಳವರೆಗೆ ಆರೋಪಿಗಳನ್ನು ಸಿಬಿಐ ವಶಕ್ಕೆ ನೀಡಿದ್ದಾರೆ.