ಧಾರವಾಡ:ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಬಂಧಿಸಿದ್ದು, ಜಿಲ್ಲಾಸ್ಪತ್ರೆಗೆ ಕರೆತಂದು ಆರೋಗ್ಯ ತಪಾಸಣೆ ನಡೆಸಿದ ಬಳಿಕ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆ ಮುಂದುವರೆಸಿದ್ದಾರೆ.
ಬೆಳಗ್ಗೆ ಗದಗನಲ್ಲಿ ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದುಕೊಂಡಿದ್ದ ಸಿಬಿಐ ಅಧಿಕಾರಿಗಳು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಕೆಲವೊತ್ತು ಡ್ರಿಲ್ ನಡೆಸಿದರು. ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದ ಬಳಿಕ ಮೆಡಿಕಲ್ ತಪಾಸಣೆ ನಡೆಸಿದ್ದರು. ನಂತರ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಕರೆ ತಂದು ಪುನಃ ವಿಚಾರಣೆ ಮುಂದುವರೆಸಲಾಗಿದೆ. ಈ ವೇಳೆ ಸೋಮು ನ್ಯಾಮಗೌಡ ಕಣ್ಣೀರು ಹಾಕಿ ಕಣ್ಣೀರು ಒರೆಸಿಕೊಳ್ಳುತ್ತ ಸಾಗಿದರು.
ಇದಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಮಗೌಡ ಅವರನ್ನು ಸಿಬಿಐ ಅಧಿಕಾರಿಗಳು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಬೆಳ್ಳಂಬೆಳಗ್ಗೆ ಗದಗದಲ್ಲಿ ವಶಕ್ಕೆ ಪಡೆದಿದ್ದ ಸಿಬಿಐ ಅಧಿಕಾರಿಗಳು, ಉಪನಗರ ಠಾಣೆಗೆ ಕರೆತಂದು ಡ್ರಿಲ್ ನಡೆಸಿದ್ದರು.