ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದ ಸಿಬಿಐ ತನಿಖೆ ಇಂದು ಸಹ ಮುಂದುವರೆದಿದ್ದು, ಸಿಬಿಐ ಅಧಿಕಾರಿಗಳು ಪ್ರಶಾಂತ ಕೇಕರೆಯನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಸಿಬಿಐ ವಿಚಾರಣೆಗಾಗಿ ಇಂದು ಕೂಡ ಹಾಜರಾಗಿದ್ದಾರೆ. ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ ಕೇಕರೆಯನ್ನು ಕೇಸ್ ಸಂಬಂಧ ಸಿಬಿಐ ವಿಚಾರಣೆಗೊಳಪಡಿಸಿದೆ. ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.