ಕರ್ನಾಟಕ

karnataka

ETV Bharat / state

ಯೋಗೀಶ್​ ಗೌಡ ಕೊಲೆ ಪ್ರಕರಣ: KAS ಅಧಿಕಾರಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ CBI - ಯೋಗೀಶ್​ ಗೌಡ ಕೊಲೆ ಪ್ರಕರಣ

ಜಿಪಂ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರ ಸಿಬಿಐ ಕಸ್ಟಡಿ ಅಂತ್ಯವಾದ ಹಿನ್ನೆಲೆಯನ್ನು ವಿಸಿ ಮೂಲಕ ಬೆಂಗಳೂರಿನ ಜನ ಪ್ರತಿನಿಧಿಗಳ ಕೋರ್ಟ್‌ಗೆ ಹಾಜರು ಪಡಿಸಿ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

ಧಾರವಾಡ ಕೇಂದ್ರ ಕಾರಾಗೃಹ
Dharwad Central Prison

By

Published : Jul 9, 2021, 9:41 PM IST

ಧಾರವಾಡ:ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಸೋಮು ನ್ಯಾಮಗೌಡರ ಸಿಬಿಐ ಕಸ್ಟಡಿ ಅಂತ್ಯವಾದ ಹಿನ್ನೆಲೆಯನ್ನು ವಿಸಿ ಮೂಲಕ ಬೆಂಗಳೂರಿನ ಜನ ಪ್ರತಿನಿಧಿಗಳ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. 14 ದಿನ ನ್ಯಾಯಾಂಗ ಬಂಧನಕ್ಕೆ‌ ನೀಡಿದ ಕಾರಣ ಸೋಮು ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಯಿತು.

ಓದಿ: ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಯಾರು ಕಾರಣ? ಈ ಬಗ್ಗೆ ಯಾರು, ಏನಂದ್ರು? ಈ ವಿಡಿಯೋ ನೋಡಿ..

ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಇಡೀ ದಿನ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳು, ಬಳಿಕ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು. ನಿನ್ನೆ ಬೆಳಗ್ಗೆ ಗದಗನಲ್ಲಿ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಬಳಿಕ ಬಂಧನ ಮಾಡಲಾಗಿತ್ತು.

ABOUT THE AUTHOR

...view details