ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಇಂದು ಕೂಡಾ ಮುಂದುವರೆದಿದೆ. ಇಂದು ಪ್ರಕರಣ ಸಂಬಂಧ ಪ್ರಮುಖರನ್ನು ಸಿಬಿಐ ವಿಚಾರಣೆಗೊಳಪಡಿಸಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣ: ಮುಂದುವರೆದ ಸಿಬಿಐ ತನಿಖೆ
ಮಾಜಿ ಸಚಿವ ವಿನಯ್ ಆಪ್ತ ಪ್ರಶಾಂತ ಕೇಕರೆ, ವಿನಯ್ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ, ವಿನಯ್ ಡೈರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಟರಾಜ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಅವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ.
ಸಿಬಿಐ ತನಿಖೆ
ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ ಕೇಕರೆ, ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ, ವಿನಯ್ ಡೈರಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಟರಾಜ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಅವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ.
ಧಾರವಾಡ ಉಪನಗರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಕರೆಸಿಕೊಂಡಿದ್ದು, ಇನ್ನೂ ಹಲವರನ್ನು ಕರೆಸಿಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ.