ಯೋಗೀಶಗೌಡ ಕೊಲೆ ಪ್ರಕರಣ ಸಿಬಿಐಗೆ: ಬಿಎಸ್‌ವೈಗೆ ಕುಟುಂಬಸ್ಥರ ಧನ್ಯವಾದ - Dharwad district news
ಯೋಗೀಶಗೌಡ ಸಹೋದರ ಗುರುನಾಥ ಗೌಡ, ತಾಯಿ ತುಂಗಮ್ಮ ಹಾಗೂ ಅವರ ಆಪ್ತರು ಧಾರವಾಡ ತಾಲೂಕಿನ ಗೋವನಕೊಪ್ಪದ ಮನೆಯಲ್ಲಿ ಸಂಭ್ರಮಪಟ್ಟಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಕುಟುಂಬಸ್ಥರೆಲ್ಲರೂ ಧನ್ಯವಾದ ಅರ್ಪಿಸಿದ್ದಾರೆ.
ಯೋಗೀಶಗೌಡ ಕುಟುಂಬ
ಧಾರವಾಡ :ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಮೃತ ಯೋಗೇಶಗೌಡ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ಸರ್ಕಾರ ಆದೇಶ ಹೊರಡಿಸಿದ ನಂತರ ಕುಟುಂಬಸ್ಥರು ಪರಸ್ಪರ ಸಿಹಿ ತಿನ್ನಿಸಿ ಸಂತೋಷ ಪಟ್ಟರು.
ಯೋಗೇಶಗೌಡ ಆಪ್ತ ಬಸವರಾಜ ಕೊರವರ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಸಿಬಿಐಗೆ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. ಆದರೆ ಸ್ವಲ್ಪ ತಡವಾಗಿಯಾದ್ರೂ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು ನಮಗೆಲ್ಲ ಸಂತೋಷ ತಂದಿದೆ. ಧಾರವಾಡ ಜಿಲ್ಲೆಯ ಹಲವು ಪ್ರಭಾವಿಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೂ ತಕ್ಕ ಶಿಕ್ಷೆ ಆಗುತ್ತೆ ಎಂದು ನಂಬಿದ್ದೇವೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ರು.