ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಯೋಗೀಶ್ ಗೌಡ ಕೊಲೆ ಪ್ರಕರಣ; ಸಿಬಿಐ ತನಿಖೆ ಮತ್ತಷ್ಟು ಚುರುಕು - Yogeesh Gowda murder case
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ಮುಖಂಡರೊಬ್ಬರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗುತ್ತಿದೆ.
ಯೋಗೀಶ್ ಗೌಡ
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿಸಾಕ್ಷ್ಯನಾಶ ಆರೋಪದ ಮೇಲೆ ಮತ್ತೊಂದು ಎಫ್‌ಐಆರ್ ದಾಖಲಿಸಲು ಸಿಬಿಐ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಕೇಳಿದ್ದಾರೆ ಎನ್ನಲಾಗುತ್ತಿದೆ.
ನ್ಯಾಯಾಧೀಶರ ಬಳಿ ಅನುಮತಿ ಕೇಳಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ಧಾರವಾಡ ಜಿಲ್ಲೆಯ ನ್ಯಾಯಾಲಯದ ನ್ಯಾಯಾಧೀಶರನ್ನು ಅಧಿಕಾರಿಗಳು ಭೇಟಿಯಾಗಿದ್ದಾರೆ. ಕೊಲೆ ಪ್ರಕರಣದ ಸಾಕ್ಷ್ಯನಾಶ ಆಗಿದೆ ಎಂದು ಮನವರಿಕೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಾಂಗ್ರೆಸ್ ಪ್ರಭಾವಿ ರಾಜಕಾರಣಿ ಸೇರಿದಂತೆ ಹಲವರ ವಿರುದ್ಧ ಸಾಕ್ಷನಾಶದ ಆರೋಪ ಕೇಳಿಬಂದಿತ್ತು.
Last Updated : Sep 16, 2020, 8:29 PM IST