ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ರಾತ್ರಿ ವೇಳೆ ಸಿಬಿಐ ಕಸ್ಟಡಿಗೆ ಪಡೆಯಲು ನಿಯಾಮಾನುಸಾರ ಕೆಲವು ನಿಯಮಗಳು ಅಡ್ಡಿಯಾಗಿದ್ದು, ನಾಳೆ ಬೆಳಗ್ಗೆ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ನಾಳೆ ಬೆಳಗ್ಗೆ ಸಿಬಿಐ ವಶಕ್ಕೆ - Former minister Vinay Kulkarni surrenders tomorrow
ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿ ಹಿನ್ನೆಲೆ ಇಂದು ರಾತ್ರಿ ವಶಕ್ಕೆ ಪಡೆದುಕೊಳ್ಳಲು ಕೆಲ ನಿಯಮಗಳು ಅಡ್ಡಿಯಾಗಿರುವ ಕಾರಣ ನಾಳೆ ಬೆಳಗ್ಗೆ ಸಿಬಿಐ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.
ವಿನಯ್ ಕುಲಕರ್ಣಿ
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಕೋರ್ಟ್ ಇಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ: ಧಾರವಾಡ ಜಿ.ಪಂ. ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು 2016, ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಜಿಮ್ನ ಹೊರಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಬೈಕ್ನಲ್ಲಿ ಬಂದಿದ್ದ ಸುಪಾರಿ ಹಂತಕರು ಈ ಕೃತ್ಯ ಎಸಗಿದ್ದರು.