ಕರ್ನಾಟಕ

karnataka

ETV Bharat / state

ನಾನು ಡಿಸಿಎಂ‌‌ ಸ್ಥಾನದ ಆಕಾಂಕ್ಷಿಯಲ್ಲ, ಪಕ್ಷದ ಶಿಸ್ತಿನ ಸಿಪಾಯಿ: ಸಿ.ಸಿ.ಪಾಟೀಲ್​​ - ಡಿಸಿಎಂ‌‌ ಸ್ಥಾನ

ಡಿಸಿಎಂ ಸ್ಥಾನದ ಆಕಾಂಕ್ಷಿ ನಾನಲ್ಲ. ನಾನು ಬಿಜೆಪಿ ಪಕ್ಷದ ಶಿಸ್ತಿನ ಕಾರ್ಯಕರ್ತ. ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ನಗರ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್

By

Published : Aug 27, 2019, 5:24 PM IST

ಹುಬ್ಬಳ್ಳಿ:ನಾನು ಡಿಸಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನು ಬಿಜೆಪಿ ಪಕ್ಷದ ಶಿಸ್ತಿನ ಕಾರ್ಯಕರ್ತ. ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್

ನಗರದಲ್ಲಿ ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವಾಗ ಅಸಮಾಧಾನ ಇರುವುದು ಸಹಜ. ಒಂದೆರಡು ದಿನ ಅಸಮಾಧಾನ ಇರುತ್ತದೆ. ಅದನ್ನು ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ ಎಂದರು.

ಪದಗ್ರಹಣ ಕಾರ್ಯಕ್ರಮದಿಂದ ನಾವು ಯಾರು ದೂರು ಉಳಿದಿಲ್ಲ. ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರ ತಾಯಿ ನಿಧನ ಹೊಂದಿದ್ದಾರೆ. ಅವರ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಲು ನಾನು ಮತ್ತು ಜಗದೀಶ್ ಶೆಟ್ಟರ್ ಬಂದಿದ್ದೇವೆ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details