ಹುಬ್ಬಳ್ಳಿ: ಟೋಕಿಯೊ ಒಲಿಂಪಿಕ್ಸ್ನಲ್ಲಿ ಪುರುಷರ ಹಾಕಿ ತಂಡ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದು ಹುಬ್ಬಳ್ಳಿಯಲ್ಲಿ ಹಾಕಿ ಪ್ರಿಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಭಾರತಕ್ಕೆ ಮತ್ತೊಂದು ಪದಕ: ಹುಬ್ಬಳ್ಳಿಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಹಾಕಿ ಪ್ರಿಯರು - Celebration in hubli for men's hockey team won bronze medal
ಭಾರತದ ಪುರುಷರ ಹಾಕಿ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದಿಂದ ಸ್ಮರಣೀಯ ಗೆಲುವು ದಾಖಲಿಸಿ ಕಂಚಿನ ಪದಕ ಗೆದ್ದುಕೊಂಡಿದೆ. ಈ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹಾಕಿ ಪ್ರಿಯರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಹಾಕಿ ಪ್ರಿಯರು
ಬರೋಬ್ಬರಿ 41 ವರ್ಷಗಳ ಬಳಿಕ ಭಾರತದ ಪುರುಷರ ಹಾಕಿ ತಂಡವು ಟೋಕಿಯೊ ಒಲಿಂಪಿಕ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿ ಜರ್ಮನಿ ತಂಡದ ವಿರುದ್ಧ 5-4 ಗೋಲುಗಳ ಅಂತರದಿಂದ ಸ್ಮರಣೀಯ ಗೆಲುವು ದಾಖಲಿಸಿ ಕಂಚಿನ ಪದಕ ಗೆದ್ದುಕೊಂಡಿದೆ. ಈ ಹಿನ್ನೆಲೆ ನಗರದ ಸೆಟ್ಲಮೆಂಟ್ ಹಾಕಿ ಅಕಾಡೆಮಿ ಎದುರು ಹುಬ್ಬಳ್ಳಿ ಹಾಕಿ ಅಕಾಡೆಮಿ ಸದಸ್ಯರು ಹಾಗೂ ಕ್ರೀಡಾಪಟುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಇದೇ ವೇಳೆ ಮುಂಬರುವ ದಿನಗಳಲ್ಲಿ ಮಹಿಳಾ ಹಾಕಿ ಕ್ರೀಡಾಪಟುಗಳು ಸಹ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತದ ಕೀರ್ತಿ ಹೆಚ್ಚಿಸಲಿ ಎಂದು ತಂಡಕ್ಕೆ ಶುಭಕೋರಿದರು.