ಧಾರವಾಡ: ಭಾರತರತ್ನ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ - Parinirvana Day by Dr. BR Ambedkar
ಧಾರವಾಡ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಆಚರಣೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬುದ್ಧವಂದನೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಕಲಾಭವನ ಆವರಣದಲ್ಲಿರುವ ಶ್ರೀಬಸವೇಶ್ವರರ ಪ್ರತಿಮೆಗೂ ಗೌರವ ಅರ್ಪಿಸಲಾಯಿತು.
ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್,ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಆರ್.ಪುರುಷೋತ್ತಮ, ಸಹಾಯಕ ನಿರ್ದೇಶಕಿ ಮಹಾದೇವಿ ಸಣ್ಣೇರ ಸೇರಿದಂತೆ , ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.