ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಯ ಬಹು ದಿನಗಳ ಬೇಡಿಕೆಯಾದ
ಟ್ರಾಫಿಕ್ ಐಲ್ಯಾಂಡ್ ಅನ್ನು ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಫ್ಲೈಓವರ್ ನಿರ್ಮಾಣಕ್ಕೆ ಆದೇಶ: ಗಡ್ಕರಿಗೆ ಧಾರವಾಡ ಪೇಡಾ ಕೊಟ್ಟು ಅಭಿನಂದನೆ - Narendra modi
ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Nithin gadkari
ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಖುಷಿಗಾಗಿ ಪ್ರಹ್ಲಾದ್ ಜೋಶಿ ನವದೆಹಲಿಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರಿಗೆ ಧಾರವಾಡ ಪೇಡಾ ಕೊಡುವುದರ ಮುಖಾಂತರ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
ಈ ಭಾಗದ ಜನರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ, ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಈ ಭಾಗದ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು.