ಹುಬ್ಬಳ್ಳಿ: ಸುಮಾರು 298 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಚನ್ನಮ್ಮ ವೃತ್ತದ ಮೇಲು ರಸ್ತೆ ಹಾಗೂ ಕಲಘಟಗಿ ಚತುಷ್ಪಥ ಹೆದ್ದಾರಿ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ಕೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಇಂದು ನಗರದ ಡೆನಿಸನ್ ಹೋಟೆಲ್ನಲ್ಲಿ ನಡೆದ ಫ್ಲೈ ಓವರ್ ಕಾಮಗಾರಿಯ ಉದ್ಘಾಟನೆಯ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಕಾಮಗಾರಿಗೆ ಚಾಲನೆ ನೀಡಿದರು. ಈ ವೇಳೆ ಸಿಎಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಜಗದೀಶ್ ಶೆಟ್ಟರ್, ಸದಾನಂದ ಗೌಡ, ಶಾಸಕ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಬಸವರಾಜ ಹೊರಟ್ಟಿ, ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವ ಹಾಗೂ ನಿವೃತ್ತ ಸೇನಾಧಿಕಾರಿ ಡಾ. ವಿ.ಕೆ. ಸಿಂಗ್, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಎಂ. ಕಾರಜೋಳ, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಭಾಗವಹಿಸಿದ್ದರು.