ಹುಬ್ಬಳ್ಳಿ: ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಮಹಾಮಾರಿ ಕೊರೊನಾ ವೈರಸ್ ದೃಢಪಟ್ಟಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೂ ಕೊರೊನಾ ಸೋಂಕು - ಪ್ರಹ್ಲಾದ್ ಜೋಶಿಗೆ ಕೋವಿಡ್
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಅವರು ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ
Central minister Pralhad Joshi
ಇದಕ್ಕೆ ಸಂಬಂಧಿಸಿದಂತೆ ಫೇಸ್ಬುಕ್, ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದ್ದು, ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಸೇರಿದಂತೆ ಅನೇಕರಿಗೆ ಕೊರೊನಾ ಸೋಂಕು ತಗುಲಿದ್ದು, ಅದರಿಂದ ಅವರು ಗುಣಮುಖರಾಗಿದ್ದಾರೆ.