ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ ಅನುಮನಾಸ್ಪದ ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಇಂದು ನಗರದ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಇಲಾಖೆ ಸಹಾಯಕ ಸಚಿವ ಸುರೇಶ ಅಂಗಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ರು.
ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರಕರಣ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ. ಸೋಮವಾರ ನಡೆದ ಘಟನೆ ಕುರಿತಂತೆ ಪರಿಶೀಲನೆ ನಡೆಸಲಾಗಿದ್ದು, ಸೂಕ್ತ ತನಿಖೆ ಕೈಗೊಳ್ಳಲಾಗಿದೆ ಎಂದರು. ಘಟನೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳಾದ ಸ್ಟೇಷನ್ ಮಾಸ್ಟರ್ ಎಸ್. ಎಂ.ವರೂಣಕುಮಾರ, ಹಾಗೂ ಆರ್ಪಿಎಫ್ ಎಎಸ್ ಐ ಮಂಜುನಾಥ್ ಎಂಬುವವರನ್ನು ಅಮಾನತು ಮಾಡಲಾಗಿದೆ ಎಂದರು.