ಹುಬ್ಬಳ್ಳಿ:ಮಹದಾಯಿ, ಕಳಸಾ-ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸುವ ಸಂಬಂಧ ರಾಷ್ಟ್ರಪತಿ ಹಾಗೂ ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ರಾಜಭವನ ಚಲೋರ‍್ಯಾಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿರ‍್ಯಾಲಿ ಮುಖಾಂತರ ನರಗುಂದ ಮಹದಾಯಿ ಹೋರಾಟ ವೇದಿಕೆ ಮತ್ತು ಜಿಲ್ಲೆಯ ಹನ್ನೊಂದು ತಾಲೂಕಿನ ರೈತರು ಹಾಗೂ ರೈತ ಮಹಿಳೆಯರು ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ, ಜು.16, 2015 ರಿಂದ ರೈತ ಸೇನಾ ಕರ್ನಾಟಕದ ನೇತೃತ್ವದಲ್ಲಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದರು. ಈ ಹೋರಾಟದಲ್ಲಿ ಹನ್ನೆರಡು ಜನ ರೈತರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಜನತೆಯ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.