ಕರ್ನಾಟಕ

karnataka

ETV Bharat / state

ಯೋಗೇಶ್ ಗೌಡ ಹತ್ಯೆ ಪ್ರಕರಣ: ಎರಡು ದಿನಗಳ ಸಿಬಿಐ ಕಸ್ಟಡಿಗೆ ಚಂದ್ರಶೇಖರ ಇಂಡಿ - Hebballi ZP Member Yogesh gowda murder case updates

ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಎರಡು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ‌ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಚಂದ್ರಶೇಖರ ಇಂಡಿ ಎರಡು ದಿನ ಸಿಬಿಐ ಕಸ್ಟಡಿಗೆ
ಚಂದ್ರಶೇಖರ ಇಂಡಿ ಎರಡು ದಿನ ಸಿಬಿಐ ಕಸ್ಟಡಿಗೆ

By

Published : Dec 15, 2020, 5:41 PM IST

ಧಾರವಾಡ:ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರನ್ನು ಎರಡು ದಿನ ಸಿಬಿಐ ಕಸ್ಟಡಿಗೆ ನೀಡಿ‌ ನ್ಯಾಯಾಲಯ ಆದೇಶಿಸಿದೆ.

ಸಿಬಿಐ ಕಸ್ಟಡಿಗೆ ನೀಡಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ. ಡಿ. 17 ರ ಸಂಜೆ 5 ಗಂಟೆಯೊಳಗೆ ಕೋರ್ಟ್‌ಗೆ ಹಾಜರುಪಡಿಸಲು ನ್ಯಾಯಾಲಯ ಸಿಬಿಐಗೆ ಸೂಚಿಸಿದೆ.

ಇದನ್ನೂ ಓದಿ:ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸರಕು ಸಾಗಣೆ ಕಾರ್ಯಾರಂಭ..!

ನಿನ್ನೆ ವಿನಯ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ಅವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಈ‌ ನಡುವೆ ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ತಮ್ಮ ವಶಕ್ಕೆ ನೀಡುವಂತೆ ಕೋರಿ ‌ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದ ‌ನ್ಯಾಯಾಧೀಶರು, ಎರಡು ದಿನಗಳ ಕಾಲ ಆರೋಪಿ ಚಂದ್ರಶೇಖರ ಇಂಡಿ‌ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ABOUT THE AUTHOR

...view details