ಹುಬ್ಬಳ್ಳಿ:ಸಿಎಂ ದೆಹಲಿ ಭೇಟಿಗೆ ಬೇರೆ ಅರ್ಥ ಕಲ್ಪಿಸುವುದು ಅನಗತ್ಯ, ಇಲಾಖೆಗಳಿಗೆ ಸಂಬಂಧಿಸಿದಂತೆ ಹಾಗೂ ಅನುದಾನಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ದೆಹಲಿಗೆ ಹೋಗುತ್ತಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಯಾರೂ ಸಹ ಪ್ರಸ್ತಾಪಿಸಿಲ್ಲ, ಇದು ಮಾಧ್ಯಮ ಸೃಷ್ಟಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ನೆರೆ ಹಾನಿ ಬಗ್ಗೆ ಕೇಂದ್ರದ ಗಮನಕ್ಕೆ ತಂದು ಅನುದಾನ ಬಿಡುಗಡೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲು ಸಿಎಂ ದೆಹಲಿಗೆ ತೆರಳಿದ್ದಾರೆ. ಬಿಜೆಪಿಯಲ್ಲಿ ಸಿಎಂ ಬದಲಾವಣೆ ಎಂಬುದು ಮಾಧ್ಯಮಗಳ ಸೃಷ್ಟಿ, ನೀವೇ ಎಲ್ಲಾ ಹೇಳುತ್ತಿದ್ದೀರಿ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ವಿಚಾರ ಇಲ್ಲ ಎಂದು ಸ್ಪಷ್ಟಪಡಿಸಿದರು.