ಕರ್ನಾಟಕ

karnataka

ETV Bharat / state

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ನಾಲ್ಕು ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಪೊಲೀಸರು ನಾಲ್ಕು ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

hubli riots case
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ

By

Published : Oct 14, 2022, 10:59 AM IST

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಠಾಣೆ ಎದುರು ಕಳೆದ ಏಪ್ರಿಲ್ 16 ರಂದು ರಾತ್ರಿ ವೇಳೆ ನಡೆದಿದ್ದ ಗಲಭೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನಾಲ್ಕು ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ ಎನ್​ಐಎ ಕೋರ್ಟ್​ಗೆ ಹಳೇ ಹುಬ್ಬಳ್ಳಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಸೀದಿಯೊಂದರ ಮೇಲೆ ಭಗವಾ ಧ್ವಜ ಹಾರಿಸಿದ್ದ ಗ್ರಾಫಿಕ್ಸ್ ಫೋಟೋವನ್ನ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಇಟ್ಟಿದ್ದಕ್ಕೆ ಗಲಭೆ ನಡೆದಿತ್ತು. ಸಾವಿರಾರು ಜನರು ಏಕಕಾಲಕ್ಕೆ ಠಾಣೆ ಮುಂದೆ ಜಮಾಯಿಸಿ ಗಲಭೆ ಸೃಷ್ಟಿಸಿದ್ದರು.

ಹಳೇ ಹುಬ್ಬಳ್ಳಿ ಪೊಲೀಸರು ಗಲಭೆ ಸೃಷ್ಟಿಸಿದವರ ಮೇಲೆ ಒಟ್ಟು 12 ಎಫ್​ಐಆರ್ ದಾಖಲಿಸಿ, 158 ಮಂದಿಯನ್ನ ಬಂಧಿಸಿದ್ದರು. ಎಐಎಂಐಎಂ ಕಾರ್ಪೊರೇಟರ್ ನಜೀರ್ ಹೊನ್ಯಾಳ ಸೇರಿ 7 ಜನ ಬಾಲಾಪರಾಧಿಗಳಿಗೆ ಮಾತ್ರ ಷರತ್ತುಬದ್ಧ ಜಾಮೀನು ದೊರೆತಿತ್ತು. ಉಳಿದ ಆರೋಪಿಗಳು ಇನ್ನೂ ಬಳ್ಳಾರಿ ಹಾಗೂ ಕಲಬುರಗಿ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ:ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಎಫ್​ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಏನಿದು ಗಲಭೆ ಪ್ರಕರಣ:ಯುವಕನೊಬ್ಬ ವಾಟ್ಸ್​ಆ್ಯಪ್ ಸ್ಟೇಟಸ್ ಇಟ್ಟದ್ದನ್ನೇ ಗುರಿಯಾಗಿಸಿಕೊಂಡು ಠಾಣೆ ಮುಂದೆ ಜನ ಜಮಾಯಿಸಿದ್ದರು. ಯುವಕನನ್ನು ತಮಗೆ ಒಪ್ಪಿಸುವಂತೆ ಪ್ರತಿಭಟನೆ ನಡೆಸಿ, ಠಾಣೆ ಮೇಲೆ ಕಲ್ಲಿನ ಸುರಿಮಳೆಗೈದಿದ್ದರು. ಆಸ್ಪತ್ರೆ, ದೇವಸ್ಥಾನ, ಮನೆಗಳ‌ ಮೇಲೆ ದೊಡ್ಡ ದೊಡ್ಡ ಕಲ್ಲು ಎಸೆದಿದ್ದರು. ಘಟನೆಯಲ್ಲಿ ಎಂಟು ಮಂದಿ ಪೊಲೀಸರು ಗಾಯಗೊಂಡಿದ್ದರು. ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದರು. ಬಳಿಕ ಗಲಭೆ ಪ್ರಕರಣ ಬೆಂಗಳೂರಿನ ಎನ್​ಐಎ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.

ABOUT THE AUTHOR

...view details