ಹುಬ್ಬಳ್ಳಿ:ಮೂವರು ಮಕ್ಕಳಿರುವ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ, ಮಗು ಜನಿಸಿದಾಗ ಮದುವೆಗೆ ನಿರಾಕರಿಸಿದ ವ್ಯಕ್ತಿಯ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎರಡು ಮಕ್ಕಳಿದ್ದರೂ ಮತ್ತೊಬ್ಬನ ಸಹವಾಸ.. ಮತ್ತೊಂದು ಮಗು ಆದ್ಮೇಲೆ ಆಗಿದ್ದೇನು..? - ನವನಗರ ಠಾಣೆಯಲ್ಲಿ ದೂರು ದಾಖಲು
ವಿವಾಹಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಸಂತ್ರಸ್ತೆ ನವನಗರ ಠಾಣೆಗೆ ದೂರು ನೀಡಿದ್ದಾಳೆ.
ಬೈರಿದೇವರಕೊಪ್ಪದ ಕಳ್ಳಿ ಓಣಿ ನಿವಾಸಿ ಸಿದ್ರಾಮ ಚಿಕ್ಕಮಠ ವಿರುದ್ಧ ಮಹಿಳೆ ಪ್ರಕರಣ ದಾಖಲಿಸಿದ್ದಾರೆ. 2007ರಲ್ಲಿ ಆ ಮಹಿಳೆ ವರೂರಿನ ನಿವಾಸಿಯೊಬ್ಬರ ಜೊತೆ ಮದುವೆಯಾಗಿದ್ದರು. ಐದು ವರ್ಷದ ಬಳಿಕ ಗಂಡನ ಆರೋಗ್ಯ ಹದಗೆಟ್ಟಿದ್ದರಿಂದ ತವರು ಮನೆಗೆ ವಾಪಸ್ ಬಂದಿದ್ದಳು. ಆ ವೇಳೆ ಸಿದ್ರಾಮ ಎಂಬಾತ ಮಕ್ಕಳಿಗೆ ಸಹಾಯ ಮಾಡುವ ನೆಪದಲ್ಲಿ ಸ್ನೇಹ ಬಯಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ. 2018 ರ ಅಕ್ಟೋಬರ್‌ನಲ್ಲಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಮದುವೆ ವಿಷಯ ಪ್ರಸ್ತಾಪಿಸಿದಾಗ ನಿರಾಕರಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.