ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ: ಬಾಲ್ಯ ವಿವಾಹ ತಡೆದ ಪೊಲೀಸರು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ

ಹುಬ್ಬಳ್ಳಿಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಬಸವೇಶ್ವರ ನಗರದಲ್ಲಿಅಪ್ರಾಪ್ತ ಬಾಲಕಿಯ ಮದುವೆ ನಡೆಯುತ್ತಿತ್ತು. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮದುವೆಯನ್ನು ತಡೆದಿದ್ದಾರೆ.

ಬಾಲ್ಯ ವಿವಾಹ ತಡೆದ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ
ಬಾಲ್ಯ ವಿವಾಹ ತಡೆದ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ

By

Published : Jan 7, 2021, 10:33 PM IST

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮದುವೆಯನ್ನು ತಡೆಯುವಲ್ಲಿ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಬಾಲ್ಯ ವಿವಾಹ ತಡೆದ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ

ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಬಸವೇಶ್ವರ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮದುವೆ ನಡೆಯುತ್ತಿತ್ತು. ಈ ಬಗ್ಗೆ ಸಾರ್ವಜನಿಕರೊಬ್ಬರು ಸಾರ್ವಜನಿಕ ತುರ್ತು ಸೇವೆಯ '112 ಎರಾಸ್'ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಓದಿ:ಲಾಕ್​ಡೌನ್ ಶಾಲೆ ಬಂದ್ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಳ

112ಕ್ಕೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಅಧಿಕಾರಿಗಳು ಮದುವೆ ತಡೆದಿದ್ದಾರೆ. ಬಾಲ್ಯ ವಿವಾಹದ ದುಷ್ಪರಿಣಾಮದ ಬಗ್ಗೆ ಪಾಲಕರಿಗೆ ತಿಳಿ ಹೇಳಿ, ಕೆಲವರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

ABOUT THE AUTHOR

...view details