ಧಾರವಾಡ: ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಸಿಟಿಜನ್ ಫಾರ್ ಡೆಮಾಕ್ರಸಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಆದೇಶ ಹಿಂಪಡೆಯುವಂತೆ ಆಗ್ರಹ - Dharwad Citizen for Democracy organization News
ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಕಾಪಾಡುವ ನಿಟ್ಟಿನಲ್ಲಿ ಹೋರಾಟ ಮಾಡಿದ್ದಾರೆ. ನಾವು ಅವರ ಪರವಾಗಿ ಇರುತ್ತೇವೆ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಸಂಘಟನೆ ಸದಸ್ಯರು ಹೇಳಿದ್ದಾರೆ.

ಸಿಟಿಜನ್ ಫಾರ್ ಡೆಮಾಕ್ರೆಸಿ ಸಂಘಟನೆ ಪ್ರತಿಭಟನೆ
ಸಿಟಿಜನ್ ಫಾರ್ ಡೆಮಾಕ್ರಸಿ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿಯ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಪ್ರಶಾಂತ್ ಭೂಷಣ್ ಅವರು ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡಲು ನಿಟ್ಟಿನಲ್ಲಿ ಹೋರಾಟ ಮಾಡಿದ್ದಾರೆ. ನಾವು ಪರವಾಗಿ ಇರುತ್ತೇವೆ ಎಂದು ಹೇಳಿದರು.
ಸರ್ವೋಚ್ಚ ನ್ಯಾಯಾಲಯವು ತನಗೆ ವಹಿಸಿಕೊಟ್ಟ ಪಾತ್ರವನ್ನು ನಿರ್ಭಿತವಾಗಿ ನ್ಯಾಯಯುತವಾಗಿ ಮತ್ತು ವಸ್ತುನಿಷ್ಠವಾಗಿ ನಿರ್ವಹಿಸುತ್ತಿದೆ ಎಂಬ ವಿಶ್ವಾಸ ನಮ್ಮದು. ಟ್ವೀಟ್‌ಗಳನ್ನು ನಿರ್ಲಕ್ಷಿಸಬೇಕು ಮತ್ತು ಪ್ರಶಾಂತ್ ಭೂಷಣ್ ಅವರನ್ನು ದೋಷಿ ಎಂದು ನೀಡಲಾಗಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.