ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯಿಂದ ನಗರದ ಕಮರಿಪೇಟೆಯಲ್ಲಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡಲಾಯಿತು.
ಮಹಾನಗರ ಪಾಲಿಕೆಯಿಂದ ಕಮರಿಪೇಟೆಯ ಅನಧಿಕೃತ ಕಟ್ಟಡಗಳ ತೆರವು
ಹು - ಧಾ ಮಹಾನಗರ ಪಾಲಿಕೆ ವತಿಯಿಂದ ನಗರದ ಕಮರಿಪೇಟೆಯಲ್ಲಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡಲಾಯಿತು.
ಅನಧಿಕೃತವಾಗಿ ತಲೆಯೆತ್ತಿದ್ದ ಕಟ್ಟಡಗಳಿಗೆ ಮಹಾನಗರ ಪಾಲಿಕೆಯಿಂದ ನೋಟಿಸ್ ನೀಡುವ ಮೂಲಕ ಶಾಂತಿಯುತವಾಗಿ ತೆರವು ಕಾರ್ಯಾಚರಣೆ ಮಾಡಲಾಯಿತು. ಈ ಕುರಿತು ಮಾತನಾಡಿದ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಸುರೇಶ ಇಟ್ನಾಳ, ತೆರವುಗೊಳಿಸುವ ಕುರಿತು ಈಗಾಗಲೇ ನೋಟಿಸ್ ಕೊಟ್ಟಿದ್ದೆವು. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಬೆಳ್ಳಂಬೆಳಗ್ಗೆ ತೆರವು ಕಾರ್ಯಾಚರಣೆ ಮಾಡಲಾಯಿತು. ಇನ್ನೂ, ಈ ಬಗ್ಗೆ ಯಾವುದೇ ರೀತಿಯ ವಿರೋಧ ವ್ಯಕ್ತವಾಗಿಲ್ಲ ಎಂದರು.
ಹು-ಧಾ ಮಹಾನಗರದಲ್ಲಿರುವ ಅನಧಿಕೃತ ಹಾಗೂ ಅಕ್ರಮ ಕಟ್ಟಡಗಳನ್ನು ಶೀಘ್ರವಾಗಿ ತೆರವು ಕಾರ್ಯಾಚರಣೆ ಮಾಡಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.