ಕರ್ನಾಟಕ

karnataka

ETV Bharat / state

ಸ್ನೇಹಿತ ರಾಜು ಪಾಟೀಲ್ ಮೃತ ದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಎಂ - ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಗೆ ಆಗಮಿಸಿದ್ದು, ಮೃತ ರಾಜು ಪಾಟೀಲ್ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಲಿದ್ದಾರೆ.

CM Basavaraj bommai arrived hubli
ಮೃತ ರಾಜು ಪಾಟೀಲ್ ಮನೆಗೆ ಬೊಮ್ಮಾಯಿ

By

Published : Sep 16, 2021, 9:32 AM IST

Updated : Sep 16, 2021, 11:15 AM IST

ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ರಾಜು ಪಾಟೀಲ್ ಮನೆಗೆ ತೆರಳಿದರು. ಕುಟುಂಬ ಸಮೇತ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಣೆ ಮಾಡಿದರು.

ಹೃದಯಾಘಾತದಿಂದ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ನಿನ್ನೆ ಇಹಲೋಕ ತ್ಯಜಿಸಿದ್ದರು. ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಕಣ್ಣೀರು ಹಾಕಿದರು.

ಸ್ನೇಹಿತ ರಾಜು ಪಾಟೀಲ್ ಮೃತ ದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಎಂ

ಈ ಸಂಬಂಧ ಪೇಸ್​ಬುಕ್​ನಲ್ಲಿ ತಮ್ಮ ನೋವು ತೋಡಿಕೊಂಡಿರುವ ಅವರು, ಸಹೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ್ ಅವರು ಇಂದು ನಿಧನರಾಗಿದ್ದು, ನಾನು ತುಂಬಾ ದುಃಖಿತನಾಗಿದ್ದೇನೆ. ರಾಜು ಪಾಟೀಲ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ರಾಜು ಪಾಟೀಲ್ ಒಬ್ಬ ಆಪ್ತ ಮಿತ್ರರಾಗಿದ್ದರು. ನಾವಿಬ್ಬರು ಬಾಲ್ಯದಿಂದ ಕೂಡಿಯೇ ಬೆಳೆದವರು ಎಂದು ಸ್ಮರಿಸಿದ್ದಾರೆ.

ನಾನು ಹುಬ್ಬಳ್ಳಿಯಲ್ಲಿ ಇದ್ದಾಗ ಅವರು ಸದಾ ನನ್ನ ಜತೆ ಇರುತ್ತಿದ್ದರು. ಅವರ ಅಗಲಿಕೆ ನನಗೆ ಅತೀವ ದುಃಖ ತರಿಸಿದೆ. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಅಂದುಕೊಂಡಿರಲಿಲ್ಲ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

Last Updated : Sep 16, 2021, 11:15 AM IST

ABOUT THE AUTHOR

...view details